News

ಹವಾಮಾನ ಇಲಾಖೆಯಿಂದ ರಾಜ್ಯದಲ್ಲಿ ಹೆಚ್ಚುತ್ತಿರುವ ಚಳಿಗೆ ಮುನ್ಸೂಚನೆ ನೋಡಿ

Check forecast of increasing cold in the state from Meteorological Department

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಚಳಿಯ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಮೂರು ನಾಲ್ಕು ದಿನಗಳಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಳಿಯ ವಾತಾವರಣವಿದ್ದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಕಂಡು ಬರುತ್ತದೆ. ಇದೀಗ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಮಳೆಯ ಕುರಿತು ದೈನಂದಿನ ವರದಿಯನ್ನು ಬಿಡುಗಡೆ ಮಾಡಿದ್ದು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದೆ. ತುಂತುರು ಮಳೆಯು ಕೆಲವು ಜಿಲ್ಲೆಗಳಲ್ಲಿ ಆಗುವಂತಹ ಸಾಧ್ಯತೆ ಇದ್ದು ಹವಾಮಾನ ಇಲಾಖೆಯು ಕೆಲ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂಬ ಮಾಹಿತಿಯನ್ನು ನೀಡಿದೆ.

Check forecast of increasing cold in the state from Meteorological Department
Check forecast of increasing cold in the state from Meteorological Department

ಕರ್ನಾಟಕದ ಹವಾಮಾನ ವರದಿ :

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವುದರಿಂದ ಮೋಡ ಕವಿದ ವಾತಾವರಣ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ತುಮಕೂರು ಜಿಲ್ಲೆಗಳಲ್ಲಿ ಇದೆ ಅಲ್ಲದೆ ಸಂಜೆ ಈ ಜಿಲ್ಲೆಗಳಲ್ಲಿ ಮಳೆ ಹನಿ ಬೀಳುವ ಸಾಧ್ಯತೆಗಳು ಕೂಡ ಹೆಚ್ಚಾಗಿದೆ. ಕೆಲವೊಂದು ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಮಳೆಯೂ ಕೂಡ ಬರಲಿದ್ದು ಆದರೆ ಹವಾಮಾನ ಇಲಾಖೆಯು ಮಳೆ ಸಾಧ್ಯತೆ ಕಡಿಮೆ ಇದೆ ಎಂದು ಮಾಹಿತಿ ನೀಡಿದೆ.

ಇದನ್ನು ಓದಿ : Amazon ವತಿಯಿಂದ ವಿದ್ಯಾರ್ಥಿ ವೇತನ : ಸುಮಾರು 50 ಸಾವಿರ ರೂಪಾಯಿ ಸಿಗುತ್ತೆ

ಈ ಜಿಲ್ಲೆಗಳಲ್ಲಿ ರಾತ್ರಿ ಚಳಿ ಹೆಚ್ಚಾಗಲಿದೆ :

ಬಳ್ಳಾರಿ ಚಿಕ್ಕಬಳ್ಳಾಪುರ ದಾವಣಗೆರೆ ಮಂಡ್ಯ ಮೈಸೂರ್ ಚಿತ್ರದುರ್ಗ ರಾಮನಗರ ತುಮಕೂರು ಮತ್ತು ಕೋಲಾರ ಜಿಲ್ಲೆಗಳು ಸೇರಿದಂತೆ, ಹಲವಾರು ಜಿಲ್ಲೆಗಳಲ್ಲಿ ಹಗಲಿನಲ್ಲಿ ಸಾಕಷ್ಟು ಬಿಸಿಲಿದ್ದು ರಾತ್ರಿಯ ನಂತರ ಚಳಿ ಹೆಚ್ಚಾಗಲಿದೆ. ಅಲ್ಲದೆ ಈ ಚಳಿಯು ಶಿವರಾತ್ರಿಯವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ ಗದಗ ಬಾಗಲಕೋಟೆ ಹಾವೇರಿ, ಬೀದರ್, ಬೆಳಗಾವಿ ರಾಯಚೂರು ಕಲಬುರ್ಗಿ ವಿಜಯಪುರ ಕೊಪ್ಪಳ ಮತ್ತು ಯಾದಗಿರಿಯಲ್ಲಿ ಒಣಹಾವೆ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ನಷ್ಟು ಬೆಂಗಳೂರಿನಲ್ಲಿ ಇರಲಿದ್ದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ಟ್ ಅಷ್ಟು ದಾಖಲಾಗಿದೆ. ಗರಿಷ್ಟ 25 ಡಿಗ್ರಿ ಸೆಲ್ಸಿಯಸ್ ನಷ್ಟು ಕೋಲಾರದಲ್ಲಿ ಹಾಗೂ ಕನಿಷ್ಠ ಹದಿನಾರು ಡಿಗ್ರಿಯಷ್ಟು ಸೆಲ್ಸಿಯಸ್ ಸ್ಥಾಪಮಾನ ಇರಲಿದೆ.


ಹೀಗೆ ಹವಾಮಾನ ಇಲಾಖೆಯ ಕರ್ನಾಟಕ ರಾಜ್ಯದಲ್ಲಿ ಯಾವ ವಾತಾವರಣ ಇರಲಿದೆ ಹಾಗೂ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆಯಿರಲಿದೆ ಎಂಬ ಮಾಹಿತಿಯನ್ನು ತಿಳಿಸಿದ್ದು ಈ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...