ನಮಸ್ಕಾರ ಸ್ನೇಹಿತರೆ ವಿವಿಧ ಘಟಕಗಳ ಸೌಲಭ್ಯ ಪಡೆಯಲು 202324ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಅರ್ಜಿಯನ್ನು ರೈತರಿಂದ ಆಹ್ವಾನಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯ ನಮೂನೆಗಳು ಲಭ್ಯವಿರುತ್ತದೆ. ಕೊನೆಯ ದಿನಾಂಕ ಮುಗಿಯುವುದರೊಳಗಾಗಿ ರೈತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೃಷಿ ಭಾಗ್ಯ ಯೋಜನೆ :
ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನೀರು ಇಂಗದಂತೆ ತಡೆಯಲು ಪಾಲಿಥಿನ್ ಓದಿಕೆ ಕೃಷಿ ಹೊಂಡ ದಿಂದ ನೀರು ಎತ್ತಲು ಡೀಸೆಲ್ ಅಥವಾ ಪೆಟ್ರೋಲ್ ಪಂಪ್ಸೆಟ್ ನೀರನ್ನು ಬೆಳಗ್ಗೆ ಹಾಯಿಸಲು ಸೂಕ್ಷ್ಮ ನೀರಾವರಿ ಸೇರಿದಂತೆ ಹಲವಾರು ರೀತಿಯ ಸೌಲಭ್ಯಗಳನ್ನು ನಿಯಮಗಳಿಗೆ ಅನುಸಾರವಾಗಿ ಪಡೆಯಬಹುದಾಗಿದೆ. ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರುವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ ಸರ್ಕಾರ : ಗ್ಯಾಸ್ ಸಿಲಿಂಡರ್ ಎಷ್ಟು ಕಡಿಮೆ ಆಯಿತು ನೋಡಿ
ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಆಹ್ವಾನ :
ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಕೃಷಿ ಭಾಗ್ಯ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಈ ಮೂರು ಜಿಲ್ಲೆಗಳ ರೈತರು ಅರ್ಹರಾಗಿದ್ದು ಸದ್ಯ ಇದೀಗ ಈ ಮೂರು ಜಿಲ್ಲೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆ ಜಿಲ್ಲೆಗಳೆಂದರೆ ಗದಗ ವಿಜಯಪುರ ಕೊಪ್ಪಳ ಜಿಲ್ಲೆಗಳು. ಈ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಈ ಜಿಲ್ಲೆಗಳಲ್ಲಿ ಕೃಷಿಭಾಗ್ಯ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಆಯಾ ಜಿಲ್ಲೆಯ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಯನ್ನು ಭೇಟಿ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಮೂರು ಜಿಲ್ಲೆಗಳಲ್ಲಿ ಇದೀಗ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಹತ್ತಿರದ ರೈತ ಕೇಂದ್ರಕ್ಕೆ ಭೇಟಿ ನೀಡಿ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದು ಸಬ್ಸಿಡಿಯನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಈ ಮೂರು ಜಿಲ್ಲೆಗಳಲ್ಲಿ ಇರುವ ನಿಮ್ಮ ಸ್ನೇಹಿತರಿಗೆ ಶೇರ್ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಗೆ ಈ ಯೋಜನೆ ಜಾರಿ ಯಾಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಜನವರಿಯಿಂದ ಮೂರು ದಿನಗಳವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಆಗುತ್ತೆ
- ಕೆಸಿಸಿ ರೈತರ 1ಲಕ್ಷ ಸಾಲ ಮನ್ನಾ ಪಟ್ಟಿ ಬಿಡುಗಡೆ : ತಮ್ಮ ಹೆಸರನ್ನು ರೈತರು ಚೆಕ್ ಮಾಡಿ ಕೊಳ್ಳಿ