ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜನಸಾಮಾನ್ಯರಿಗಾಗಿ ಜಾರಿಗೆ ತರುತ್ತಿದ್ದು ಅದರಲ್ಲಿಯೂ ಮುಖ್ಯವಾಗಿ ಹೆಣ್ಣು ಮಕ್ಕಳಿಗಾಗಿ ಸಾಕಷ್ಟು ಯೋಜನೆಗಳನ್ನು ನಾವು ಜಾರಿಗೆ ತಂದಿರುವುದನ್ನು ನೋಡಬಹುದಾಗಿದೆ. ಅದರಂತೆ ಇದೀಗ ಮತ್ತೊಂದು ಹೊಸ ಯೋಜನೆಯನ್ನು ಜನಸಾಮಾನ್ಯರಿಗಾಗಿ ರಾಜ್ಯ ಸರ್ಕಾರವು ಜಾರಿಗೆ ತರುತ್ತಿದ್ದು ಆ ಯೋಜನೆ ಏನೆಂದು ನೋಡುವುದಾದರೆ ಉಚಿತ ವಾಹನ ತರಬೇತಿ ಯೋಜನೆಯಾಗಿದೆ. ಅರ್ಹ ಅಭ್ಯರ್ಥಿಗಳು ಉಚಿತ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿಗೆ ಉಚಿತ ವಾಹನ ತರಬೇತಿ ಯೋಜನೆಯ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಈ ಸಂಸ್ಥೆಗಳ ಅಡಿಯಲ್ಲಿ ಉಚಿತ ವಾಹನ ತರಬೇತಿ ಯೋಜನೆ :
ಕರ್ನಾಟಕ ಸರ್ಕಾರವು ಕೆಲವೊಂದು ಸಂಸ್ಥೆಗಳ ಅಡಿಯಲ್ಲಿ ಉಚಿತ ವಾಹನ ತರಬೇತಿ ಯೋಜನೆಯನ್ನು ಜಾರಿಗೆ ತಂದಿದ್ದು ಆ ಸಂಸ್ಥೆಗಳು ಯಾವುವೆಂದರೆ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿ ನೀಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನ ಪತ್ರವನ್ನು ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಕರ್ನಾಟಕ ಸರ್ಕಾರವು ಹಮ್ಮಿಕೊಂಡಿದೆ.
ಉಚಿತವಾಹನ ತರಬೇತಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :
ಲಘು ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18ರಿಂದ ಗರಿಷ್ಠ 45 ವರ್ಷಗಳ ವರೆಗೆ ಇರಬೇಕು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಅಗತ್ಯವಿರುವ ದಾಖಲೆಗಳು :
ಸರ್ಕಾರದ ಈ ಹೊಸ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಅಥವಾ ಶಾಲಾ ವರ್ಗಾವಣೆ ಪತ್ರ ಆಧಾರ್ ಕಾರ್ಡ್ ಜಾತಿ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ಮೂರನೇ ಮಹಡಿ ಶಾಂತಿನಗರ ಬಸ್ ನಿಲ್ದಾಣ ಬೆಂಗಳೂರು 560027 ಈ ಕಚೇರಿಗೆ ಹೋಗಿ 31-01-2024 ದಿನಾಂಕದ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ :
ಉಚಿತ ವಾಹನ ತರಬೇತಿ ಯೋಜನೆಯ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಸಂಸ್ಥೆಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು. https://www.mybmtc.gov.in ಈ ವೆಬ್ ಸೈಟ್ ಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆಗಳಾದ, 7760991085,6364858520,7892529634,7760576556,7760991348,080-22537481 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಹೀಗೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ಉಚಿತ ವಾಹನ ತರಬೇತಿ ಪಡೆಯಬಹುದಾಗಿದೆ. ಮಾಹಿತಿಯನ್ನು ನಿಮಗೆ ತಿಳಿದಿರುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು