ನಮಸ್ಕಾರ ಸ್ನೇಹಿತರೆ ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಕರ್ನಾಟಕ ರಾಜ್ಯ ಸರ್ಕಾರದಿಂದ ಜಾರಿ ಹೇಗೆ ತಂದಿದ್ದು ಇದೀಗ ಮತ್ತೊಂದು ಹೊಸ ಯೋಜನೆ ಯ ಬಗ್ಗೆ ತಿಳಿಸಲಾಗುತ್ತಿದೆ. 90 ಸಾವಿರ ರೂಪಾಯಿಗಳ ಸಹಾಯಧನವನ್ನು ಮಹಿಳೆಯರಿಗೆ ರಾಜ್ಯ ಸರ್ಕಾರವು ನೀಡುತ್ತಿದ್ದು ಆ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ನೋಡಬಹುದು.
ಉದ್ಯೋಗಿನಿ ಯೋಜನೆ :
ಪ್ರತಿ ತಿಂಗಳು ಕರ್ನಾಟಕ ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಹಾಯವಾಗಬೇಕೆಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರ ರೂಪಾಯಿಗಳನ್ನು ನೀಡುತ್ತಿತ್ತು ಆದರೆ ಇದೀಗ ಸ್ವಯಂ ಉದ್ಯೋಗಿಗಳಾಗಿ ಮಹಿಳೆಯರು ದುಡಿಯಲು 90 ಸಾವಿರ ರೂಪಾಯಿಗಳವರೆಗೆ ಸರ್ಕಾರದಿಂದ ಸಹಾಯಧನ ನೀಡುವಂತಹ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಮಹಿಳೆಯರು ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗಿಗಳಾಗಿ ಜೀವನ ನಡೆಸಲು ಸಹಾಯಧನವನ್ನು ಸರ್ಕಾರ ನೀಡಲು ಈ ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಗೆ ಮಹಿಳೆಯರಿಗೆ ಸಹಾಯಧನ ನೀಡಲಾಗುತ್ತದೆ :
ಟೈಲರಿಂಗ್ ಹೋಮ್ ಮೇಡ್ ಫುಡ್ ಪಾರ್ಲರ್ ಅಗರಬತ್ತಿ ತಯಾರಿಕೆ ಸೇರಿದಂತೆ ಹಲವಾರು ಸ್ವಯಂ ಉದ್ಯೋಗವನ್ನು ಆರಂಭಿಸಲು ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸರ್ಕಾರವು ಸಹಾಯಧನವನ್ನು ನೀಡುತ್ತದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳೆಯರು ಕರ್ನಾಟಕದವರಾಗಿದ್ದು 18 ರಿಂದ 55 ವರ್ಷದ ಒಳಗೆ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ಒಂದುವರೆ ಲಕ್ಷಕ್ಕಿಂತ ಹೆಚ್ಚಿರಬಾರದು.
ಇದನ್ನು ಓದಿ : ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?
ಅರ್ಜಿ ಸಲ್ಲಿಸುವ ವಿಧಾನ :
ಉದ್ಯೋಗಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಹತ್ತಿರದ ಬ್ಯಾಂಕುಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರು ಅರ್ಜಿಯನ್ನು ಸಲ್ಲಿಸಬೇಕಾದರೆ ಉದ್ಯೋಗದ ಸಂಪೂರ್ಣ ವಿವರ ರೇಷನ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಕೆಲವೊಂದು ಅಗತ್ಯ ದಾಖಲೆಗಳನ್ನು ಬ್ಯಾಂಕಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತರುತ್ತಿದ್ದು ಇದೀಗ ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಮಹಿಳೆಯರು 90 ಸಾವಿರ ರೂಪಾಯಿಗಳವರೆಗೆ ಸಹಾಯಧನವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಸ್ವಂತ ಉದ್ಯೋಗವನ್ನು ಮಾಡಲು ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ ಲಭ್ಯವಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ