ನಮಸ್ಕಾರ ಸ್ನೇಹಿತರು ಇವತ್ತಿನ ಲೇಖನದಲ್ಲಿ ನಿಮಗೆ SSP ಸ್ಕಾಲರ್ಶಿಪ್ 2023 ಫಾರ್ ಒಬಿಸಿ ಬಗ್ಗೆ ತಿಳಿಸುತ್ತಿದ್ದು, ಈ ಸ್ಕಾಲರ್ ಶಿಪ್ ಗೆ ವಿದ್ಯಾರ್ಥಿಗಳು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಎಸ್ ಎಸ್ ಪೀ ಸ್ಕಾಲರ್ಶಿಪ್ :
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ವಿದ್ಯಾರ್ಥಿಗಳು ಇಲಾಖೆ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿ ವೇತನವು ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿ ವೇತನವಾಗಿದ್ದು ಇದನ್ನು ಹಿಂದುಳಿದ ವರ್ಗಗಳ ಇಲಾಖೆಯು ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸರ್ಕಾರವು ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ಯೋಜನೆಯ ಸದುಪಯೋಗವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :
ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ ಒಂದು ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಕೋಸುಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಈ ವಿದ್ಯಾರ್ಥಿ ವೇತನವನ್ನು ಪಡೆಯುವುದರಿಂದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ವಿದ್ಯಾರ್ಥಿ ವೇತನ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಹೀಗೆ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.
ಅಗತ್ಯವಿರುವ ದಾಖಲೆಗಳು :
ಈ ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ್ ಸಂಖ್ಯೆ, ಮೊಬೈಲ್ ನಂಬರ್ ಇಮೇಲ್ ಐಡಿ ಎಸ್‌ಎಸ್‌ಎಲ್‌ಸಿ ನೋಂದಣಿ ಸಂಖ್ಯೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಒಂದು ವೇಳೆ ಅಂಗವಿಕಲರಾಗಿದ್ದರೆ ಅಂಗವಿಕಲತೆಯ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು.
ಇದನ್ನು ಓದಿ : ಸರ್ಕಾರದಿಂದ 8 ತಿಂಗಳಲ್ಲಿ ಉಚಿತ ಜಾಮೀನು ರೈತರಿಗೆ : ಯಾರೆಲ್ಲ ಈ ಜಮೀನು ಪಡೆಯಬಹುದು
ಅರ್ಜಿ ಸಲ್ಲಿಸುವ ವಿಧಾನ :
ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ssp.postmatric.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಇಲಾಖೆಯು ನೀಡಿರುವ ಕೊನೆಯ ದಿನಾಂಕವಾದ 10-01-2024 ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ 8050770005 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕಾಗುತ್ತದೆ.
ಹೀಗೆ ರಾಜ್ಯ ಸರ್ಕಾರವು ಎಸ್‌ಎಸ್‌ಟಿ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದ್ದು ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, ಇದರ ಹೆಚ್ಚಿನ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಶೇರ್ ಮಾಡುವ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆಯಬಹುದು ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಉಚಿತವಾಗಿ ಅನ್ಲಿಮಿಟೆಡ್ ಡೇಟಾ ಪಡೆಯಿರಿ :ಈ ಸಿಮ್ ಹೊಂದಿರುವವರಿಗೆ ಮಾತ್ರ ಆಫರ್
- ಮೈಚಾಂಗ್ ಚಂಡಮಾರುತ : ನೌಕರರಿಗೆ ಮನೆಯಲ್ಲಿಯೇ ಕೆಲಸ ಮಾಡಲು ಸೂಚನೆ; ಶಾಲಾ ಕಾಲೇಜುಗಳ ಕಥೆ ಏನು..?