ನಮಸ್ಕಾರ ಸ್ನೇಹಿತರೇ ಕೇಂದ್ರ ಸರ್ಕಾರವು ದೇಶದ ಬಡಜನರಿಗಾಗಿ ಹಾಗೂ ನಿರ್ಗತಿಕರಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಚಯಿಸುತ್ತಿದ್ದು ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಬಹುದು. ಈ ನಿಟ್ಟಿನಲ್ಲಿ ದೇಶದಲ್ಲಿ ವಿಶೇಷವಾದ ಆರೋಗ್ಯ ಯೋಜನೆಯನ್ನು ಈಗಾಗಲೇ ಸರ್ಕಾರವು ಪರಿಚಯಿಸಿದ್ದು ಕೇಂದ್ರ ಸರ್ಕಾರದ ಈ ವಿಶೇಷ ಆರೋಗ್ಯ ಯೋಜನೆ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಆಯುಷ್ಮಾನ್ ಭಾರತ್ ಯೋಜನೆ :
ಉಚಿತ ಚಿಕಿತ್ಸೆ ಪಡೆಯಲು ದೇಶದ ಬಡ ಜನರು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪರಿಚಯಿಸಿದ್ದು ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ದೇಶದಲ್ಲಿರುವ ಜನರು ಆಯುಷ್ಮಾನ್ ಕಾರ್ಡನ್ನು ಹೊಂದಿರುವುದು ಮುಖ್ಯವಾಗಿರುತ್ತದೆ. ಕೇಂದ್ರ ಸರ್ಕಾರದ ಈ ಯೋಜನೆಯು ದೇಶದ ಕೋಟ್ಯಾಂತರ ಜನರಿಗೆ ಅನುಕೂಲವಾಗಲಿದ್ದು ಉಚಿತ ಚಿಕಿತ್ಸೆಯನ್ನು ಈ ಯೋಜನೆಯ ಮೂಲಕ ಪಡೆದು ತಮ್ಮ ಆರೋಗ್ಯದ ಸಮಸ್ಯೆಯಿಂದ ಬಡವರು ದೂರವಿರಬಹುದಾಗಿದೆ.
ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ :
ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಮತ್ತು ರಾಷ್ಟ್ರೀಯ ಭೀಮ ಯೋಜನೆಯ ಅಡಿಯಲ್ಲಿ ನೊಂದಾಯಿತರಾಗಿರುವ ಅಭ್ಯರ್ಥಿಗಳು ವಾರ್ಷಿಕ ಕುಟುಂಬಕ್ಕೆ ತಲ 5 ಲಕ್ಷಗಳವರೆಗೆ ಉಚಿತವಾಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಶೇಕಡ 30ರಷ್ಟು ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದಲ್ಲಿ ಎಪಿಎಲ್ ಕಾರ್ಡ್ದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದೆ ಇರುವವರು ಚಿಕಿತ್ಸಾ ವೆಚ್ಚವನ್ನು ಪಡೆಯಬಹುದಾಗಿತ್ತು ಅವರಿಗೆ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಒಂದುವರೆ ಲಕ್ಷ ರೂಪಾಯಿಗಳವರೆಗೆ ಸಹಾಯವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಬಿಗ್ ಬಾಸ್ ಮನೆಯ ಹೊರಗೆ ಡ್ರೋನ್ ಪ್ರತಾಪ್ ಮತ್ತು ಸಂಗೀತಾ
ಆಯುಷ್ಮಾನ್ ಕಾರ್ಡ್ ಪಡೆಯಲು ಇರುವ ದಾಖಲೆಗಳು :
ಆಯುಷ್ಮಾನ್ ಕಾರ್ಡ್ ಪಡೆಯಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗಿದ್ದು ಅವುಗಳೆಂದರೆ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಅಡ್ರೆಸ್ ಪ್ರೂಫ್ ಮೊಬೈಲ್ ನಂಬರ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿದ್ದರೆ ಮಾತ್ರ ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬಹುದಾಗಿದ್ದು ಈ ಯೋಜನೆಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ 18 ವರ್ಷಕ್ಕಿಂತ ಮೇಲ್ಪಟ್ಟವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಆಯುಷ್ಮಾನ್ ಕಾರ್ಡ್ ಯೋಜನೆಯಡಿಯಲ್ಲಿ ಉಚಿತವಾಗಿ ಬಡವರು ಹಾಗೂ ನಿರ್ಗತಿಕರಿಗೆ ಚಿಕಿತ್ಸಾ ಸೌಲಭ್ಯವನ್ನು ನೀಡುವುದರಿಂದ ತಮ್ಮ ಆರೋಗ್ಯ ಸಮಸ್ಯೆಯನ್ನು ವಿಶೇಷವಾಗಿ ಬಡವರು ದೂರವಾಗಿಸಿಕೊಳ್ಳಬಹುದಾಗಿದೆ ಹಾಗಾಗಿ ನಿಮಗೆ ತಿಳಿದಿರುವ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡುವುದರ ಮೂಲಕ ಕೇಂದ್ರ ಸರ್ಕಾರದಿಂದ ಆಯುಷ್ಮನ್ ಕಾರ್ಡು ಯೋಜನೆ ಅಡಿಯಲ್ಲಿ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಬಹುದು ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- UPI ಬಳಸುವವರಿಗೆ ಕನಿಷ್ಠ ಸಮಯ ಹಾಗು ಪಾವತಿ ಮಿತಿ 2000 ಅಳವಡಿಸಿದೆ
- ಗೃಹ ಲಕ್ಷ್ಮಿ ಯೋಜನೆಯ 4 ನೇ ಕಂತಿನ ಹಣವನ್ನು ಪಡೆಯಲು ಹೊಸ ಷರತ್ತು