ನಮಸ್ಕಾರ ಸ್ನೇಹಿತರೆ ಟಾಟಾ ಎ ಐ ಎ ಜೀವವಿಮ ಕಂಪನಿಯು ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಂಬಲ ನೀಡುವ ಉದ್ದೇಶದಿಂದ ಹಣಕಾಸಿನ ನೆರವನ್ನು ನೀಡುವ ಸಲುವಾಗಿ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ ಅದರಂತೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ದಾಖಲೆಗಳು ಬೇಕು ಎಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಟಾಟಾ ಎ ಐ ಎ ಜೀವ ವಿಮಾ ಕಂಪನಿ ವಿದ್ಯಾರ್ಥಿ ವೇತನ :
ಅರ್ಥಶಾಸ್ತ್ರ ಲೆಕ್ಕ ಪತ್ರ ನಿರ್ವಹಣೆ ಮತ್ತು ಹಣಕಾಸು ಬ್ಯಾಂಕಿಂಗ್ ನಿರ್ವಹಣೆ ಅಂಕಿ ಅಂಶಗಳು ಡೇಟಾ ವಿಜ್ಞಾನ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ ಅಥವಾ ಪಿಜಿ ಡಿಪ್ಲೋಮೋ ಕೋರ್ಸ್ ಗಳಲ್ಲಿ ಮೊದಲ ವರ್ಷದಲ್ಲಿ ವಿದ್ಯಾರ್ಥಿಗಳು ಓದುತ್ತಿದ್ದರೆ ಅವರಿಗೆ ಟಾಟಾ ಎ ಐ ಎ ಜೀವವಿಮ ಕಂಪನಿಯ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ 25,000 ಗಳವರೆಗೆ ವಿದ್ಯಾರ್ಥಿ ವೇತನವನ್ನು ಒಂದು ಬಾರಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಎ ಐ ಎ ಜೀವವಿಮ ಕಂಪನಿ ವತಿಯಿಂದ ನೀಡಲಾಗುವ ಟಾಟಾ ಫಾರಸ್ಕಾಲರ್ಶಿಪ್ 2023 ಕಾರ್ಯಕ್ರಮದ ಅಡಿಯಲ್ಲಿ ಹಣಕಾಸಿನ ನೆರವನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ಬೆಂಬಲ ಸೇವೆಗಳನ್ನು ಒದಗಿಸುವ ಗುರಿಯನ್ನು ಈ ಕಂಪನಿಯು ಹೊಂದಿದೆ.
ಇದನ್ನು ಓದಿ : ನಾಡ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸ್ಥಳೀಯರಿಗೆ ಮೊದಲ ಆಧ್ಯತೆ
ವಿದ್ಯಾರ್ಥಿವೇತನ ಪಡೆಯಲು ಇರುವ ಅರ್ಹತೆಗಳು :
ಟಾಟಾ ಎ ಐ ಎ ವಿಮಾ ಕಂಪನಿಯು ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು 5 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಎಲ್ಲ ಮೂಲಗಳಿಂದ ಮೀರಿರಬಾರದು. ವಿಮೆ ನಿರ್ವಹಣೆ ಡೇಟಾ ವಿಜ್ಞಾನ ಅಪಾಯ ನಿರ್ವಹಣೆ ಬ್ಯಾಂಕಿಂಗ್ ಅಂಕಿ ಅಂಶಗಳು ಹೀಗೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಕೊನೆಯ ದಿನಾಂಕ 15-12-2023 ಇರುತ್ತದೆ ಈ ದಿನಾಂಕದೊಳಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸುಮಾರು 25 ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಹೀಗೆ ಟಾಟಾ ಜೀವ ವಿಮಾ ಕಂಪನಿಯು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸುವ ಸಲುವಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯದ ವಿದ್ಯಾರ್ಥಿಗಳಿಗೆ 35,000 ಪ್ರೋತ್ಸಾಹ ಧನ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ
- BPL ಕಾರ್ಡ್ ಇರುವವರಿಗೆ 5 ಲಕ್ಷ ಹಾಗೂ APL ಕಾರ್ಡ್ ಇರುವವರಿಗೆ 1.5 ಲಕ್ಷ ಉಚಿತ