News

ಸುಮಾರು 75 ಸಾವಿರ ರೂಪಾಯಿಗಳು ಈ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಲಿಂಕ್‌ ಬಳಸಿ ಅಪ್ಲೈ ಮಾಡಿ

About 75 thousand rupees scholarship for students

ನಮಸ್ಕಾರ ಸ್ನೇಹಿತರೆ ಇದೀಗ colgate ಸಂಸ್ಥೆಯು ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಭಾರತದಲ್ಲಿ ಅತಿ ದೊಡ್ಡ ಮಾರುಕಟ್ಟೆಯನ್ನು ಹೊಂದಿರುವ ಕೋಲ್ಗೇಟ್ ಕಂಪನಿಯು ಇದೀಗ ಸಂಸ್ಥೆಯ ಕೊಡುಗೆಯಾದ ಡಿ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ನಿರ್ಧರಿಸಿದೆ.

About 75 thousand rupees scholarship for students
About 75 thousand rupees scholarship for students

ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ :

ಇದೀಗ ಕೋಲ್ಗೇಟ್ ಕಂಪನಿಯು ದೇಶದಲ್ಲಿ ವಾಸಿಸುತ್ತಿರುವ ಜನರ ಹಲ್ಲು ಗಟ್ಟಿಯಾಗಿಸುವುದಲ್ಲದೆ ಶಿಕ್ಷಣ ಪಡೆದುಕೊಳ್ಳುವ ವಿದ್ಯಾರ್ಥಿಗಳ ಮುಖದಲ್ಲಿಯೂ ಸಹ ನಗುವನ್ನು ತರಿಸುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ.

ವಿದ್ಯಾರ್ಥಿ ವೇತನ ಪಡೆಯಲು ಇರುವ ಅರ್ಹತೆಗಳು :

ಕೋಲ್ಗೇಟ್ ಕಂಪನಿಯು ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ದೇಶದ ಯಾವುದೇ ರಾಜ್ಯದ ವಿದ್ಯಾರ್ಥಿಯು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ವರ್ಷದ ಕೋರ್ಸಿನಲ್ಲಿ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಎಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. 60ರಷ್ಟು ಸೈನ್ಸ್ ವಿಭಾಗದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅಂಕವನ್ನು ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ದಾಖಲೆಗಳು :

ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಯ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಪಾಸ್ಪೋರ್ಟ್ ಸೈಜ್ ಫೋಟೋ ಸೆಕೆಂಡ್ ಪಿಯುಸಿ ಮಾರ್ಕ್ಸ್ ಕಾರ್ಡ್ ಬಿಡಿಎಸ್ ಕೋರ್ಸ್ ಗೆ ಪ್ರವೇಶ ಪಡೆದಿರುವಂತಹ ದಾಖಲೆ ಬ್ಯಾಂಕ್ ಪಾಸ್ ಬುಕ್ ಆದಾಯ ಪ್ರಮಾಣ ಪತ್ರ ಗಳನ್ನು ಹೊಂದಿರಬೇಕು.


ಇದನ್ನು ಓದಿ : ಆಧಾರ್ ಕಾರ್ಡ್ ಉಚಿತ ತಿದ್ದುಪಡಿ ಕೇವಲ 2 ದಿನ ಮಾತ್ರ ಬಾಕಿ

ಅರ್ಜಿ ಸಲ್ಲಿಸುವ ವಿಧಾನ :

Colate ಕಂಪನಿಯು ವಿದ್ಯಾರ್ಥಿವೇತನವನ್ನು ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅಧ್ಯಯನ ಸಲ್ಲಿಸಬೇಕಾದರೆ ಈ ವೆಬ್ಸೈಟ್ಗೆ ಭೇಟಿ ನೀಡಬೇಕು. https://www.buddy4study.com/page/colgate-keep-india-smiling-scholarship-program 2024 ಜನವರಿ 31ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿ ಸುಮಾರು 75,000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.

ಹೀಗೆ colgate ಕಂಪನಿಯು ಆರ್ಥಿಕವಾಗಿ ಹಿಂದುಳಿದ ಹಾಗೂ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಉತ್ತೇಜಿಸುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಬಗ್ಗೆ ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...