ನಮಸ್ಕಾರ ಸ್ನೇಹಿತರೆ 2024ರ ಜನವರಿ ಅಥವ ಫೆಬ್ರವರಿಯಲ್ಲಿ ಭಾರತೀಯ ಸೇನೆಯು ಅಧಿಕೃತ ಅಧಿಸೂಚನೆಯೊಂದನ್ನು ಅಗ್ನಿವೀರ್ ನೇಮಕಾತಿಗೆ ಬಿಡುಗಡೆ ಮಾಡಲು ಸಿದ್ಧವಾಗಿದೆ. ಭಾರತೀಯ ಸೇನೆಗೆ ಅಗ್ನಿವೀರಾಗಿ ಸೇರುವ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಿದರೆ ತಪ್ಪಾಗಲಾರದು. ಅರ್ಹತೆ ಮಾನದಂಡಗಳು ನೇಮಕಾತಿಯ ಪ್ರಕ್ರಿಯೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಅಗ್ನಿವೀರ್ ನೇಮಕಾತಿ ಇರುವ ಹುದ್ದೆಗಳು :
ಸರಿ ಸುಮಾರು ಭಾರತೀಯ ಸೇನೆಯ ಅಗ್ನಿವೀರ್ಣ ವಿವಿಧ ಹುದ್ದೆಗಳಿಗೆ 25000 ಹುದ್ದೆಗಳನ್ನು ಪ್ರಕಟಿಸುವ ನಿರೀಕ್ಷೆಯಿದ್ದು, ಆದರೂ ಓಬಿಸಿ ಈಡಬ್ಲ್ಯೂಎಸ್ಎಸ್ ಇತ್ಯಾದಿಗಳಿಗೆ ಮೀಸಲಾತಿಯನ್ನು ಸಹ ಪ್ರತಿ ಹುದ್ದೆಗೆ ನೀಡಲಾಗಿದ್ದು ನಿಖರವಾದ ಖಾಲಿ ಹುದ್ದೆಗಳ ಸಂಖ್ಯೆಯನ್ನು ಭಾರತೀಯ ಸೇನೆ ಅಧಿಕೃತವಾಗಿ ಅದಿ ಸೂಚನೆಯನ್ನು ಬಿಡುಗಡೆ ಮಾಡಿದಾಗ ಮಾತ್ರ ತಿಳಿಯುತ್ತದೆ.
ಅಗ್ನಿವೀರ್ ಹುದ್ದೆಗೆ ಇರುವ ಅರ್ಹತೆಗಳು :
ಭಾರತೀಯ ಸೇನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಶೇಕಡ 45ರಷ್ಟು ಅಂಕಗಳೊಂದಿಗೆ ಮೆಟ್ರಿಕ್ಯುಲೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ. ಭೌತಶಾಸ್ತ್ರ ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರವನ್ನು ಅಭ್ಯರ್ಥಿಗಳು ವಿಷಯಗಳಾಗಿ ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಐಟಿಐ ಟ್ರೇಡ್ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅರ್ಜಿದಾರರ ವಯಸ್ಸು 17.5 ವರ್ಷ ಮತ್ತು 23 ವರ್ಷಗಳ ನಡುವೆ ಇರಬೇಕಾಗುತ್ತದೆ. ಹೀಗೆ ಕೆಲವೊಂದು ಅರ್ಹತೆಗಳನ್ನು ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿಗೆ ಅಭ್ಯರ್ಥಿಗಳು ಹೊಂದಿರಬೇಕು.
ಇದನ್ನು ಓದಿ : ಹೊಸ ರೇಷನ್ ಕಾರ್ಡ್ ವಿತರಣೆ : ಕೆಲವೇ ದಿನಗಳು ಮಾತ್ರ ಅವಕಾಶ ಕಲ್ಪಿಸಲಾಗಿದೆ
ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ಸೇನೆಯಲ್ಲಿ ಅಗ್ನಿವೀರು ಹುದ್ದೆಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://joinindianarmy.nic.in/ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಮೂಲಭೂತ ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ಅರ್ಹತೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ಹಾಗೂ ಒಂದು ಪಾಸ್ಪೋರ್ಟ್ ಸೈಜ್ ಫೋಟೋವನ್ನು ಸಹ ನೀಡಬೇಕಾಗುತ್ತದೆ. ಹೀಗೆ ಆನ್ಲೈನ್ ಮೂಲಕ ನೀವು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಭಾರತೀಯ ಸೇನೆಗೆ ಸಂಬಂಧಿಸಿದಂತೆ ಜನವರಿ ಅಥವ ಫೆಬ್ರವರಿಯಲ್ಲಿ ಅಗ್ನಿವೀರ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು ಈ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡುವ ಮೂಲಕ ಅವರಿಗೆ ಅಗ್ನಿವೀರಾಗಿ ಭಾರತೀಯ ಸೇನೆಗೆ ಸೇರುವ ಕನಸನ್ನು ನನಸಾಗಿಸಿಕೊಳ್ಳಬಹುದು ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ದರ್ಶನ್ ತನ್ನ ಅಭಿಮಾನಿಗಳಿಗೆ ಮನವಿ ಮಾಡಿದ್ದು ಏಕೆ.? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- 1500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ : ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ, ಹೆಚ್ಚಿನ ಮಾಹಿತಿ ಇಲ್ಲಿದೆ