ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದ್ದು , ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತಿರುವುದರ ಜೊತೆಗೆ ರಾಜ್ಯದಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರವು ಕೊಡುವುದಾಗಿ ಭರವಸೆಯನ್ನು ನೀಡಿತ್ತು.
ಒಟ್ಟು 10 ಕೆಜಿ ಉಚಿತ ಅಕ್ಕಿಯನ್ನು ಬಿಪಿಎಲ್ ಕಾರ್ಡ್ ಹೊಂದಿರುವ ಹಾಗೂ ಅಂತಿಯೋದಯ ಕಾರ್ಡ್ ಹೊಂದಿರುವವರಿಗೆ ತಿಳಿಸಲಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದಾಗಿ ಹೆಚ್ಚುವರಿ ಅಕ್ಕಿಯನ್ನು ಸರ್ಕಾರಕ್ಕೆ ಇದುವರೆಗೂ ಒದಗಿಸಲು ಸಾಧ್ಯವಾಗಿರಲಿಲ್ಲ ಹಾಗಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲು ನಿರ್ಧರಿಸಿತ್ತು.
34 ರೂಪಾಯಿಗಳಂತೆ 170 ಜಮಾ :
ಈಗಾಗಲೇ ತಿಳಿದಿರುವಂತೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಗೆ 170 ರೂಪಾಯಿಗಳನ್ನು ಸರ್ಕಾರ ಜಮಾ ಮಾಡುತ್ತಿದೆ ಆದರೆ ಪ್ರತಿಯೊಂದು ಮನೆಯಲ್ಲಿಯೂ ಕೂಡ ಎಷ್ಟು ಸದಸ್ಯರಿದ್ದಾರೋ ಅಷ್ಟು ಸದಸ್ಯರಿಗೆ ತಲಾ 170 ರೂಪಾಯಿಗಳಂತೆ ಪ್ರತಿ ತಿಂಗಳು ಜಮಾ ಮಾಡುತ್ತಿಲಾಗುತ್ತಿದೆ. ಈ ಹಣವು ಕೆವೈಸಿ ಆಗಿರುವ ಬ್ಯಾಂಕ್ ಖಾತೆಗೆ ಸಂದಾಯವಾಗುತ್ತದೆ. ಅದರಂತೆ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದಲೂ ಅಕ್ಕಿ ಒದಗಿಸುವ ಬಗ್ಗೆ ಮಾತನಾಡುತ್ತಿದ್ದು ಆದರೆ ಹೆಚ್ಚುವರಿಯಾಗಿ ಅಕ್ಕಿ ಒದಗಿಸಲು ಸಾಧ್ಯವಾಗದೆ ಇರುವ ಕಾರಣ ಈಗಲೂ ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಿವೆ.
ಇದನ್ನು ಓದಿ : ಮುಂಗಾರು ಬೆಳೆ ಸಮೀಕ್ಷೆ ಆರಂಭ: ಸಮೀಕ್ಷೆ ಮಾಡಿದರೆ ಆಗುವ ಅನುಕೂಲಗಳು ಇಲ್ಲಿದೆ
ಸ್ಟೇಟಸ್ ಚೆಕ್ ಮಾಡುವ ವಿಧಾನ :
ಹಂತ ಹಂತವಾಗಿ ಪ್ರತಿ ಜಿಲ್ಲೆಗೂ ಇದೀಗ ನಾಲ್ಕನೇ ಕಂತಿನ ಹಣವು ತಲುಪುತ್ತಿದ್ದು ನವೆಂಬರ್ ತಿಂಗಳ ಹಣವು ನಿಮ್ಮ ಖಾತೆಗೆ ಬಂದಿದೆಯೇ ಇಲ್ಲವೇ ಎಂಬುದನ್ನು ಡಿಪಿ ಕರ್ನಾಟಕ ಮೊಬೈಲ್ ಆಪ್ ನ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ. ಅಲ್ಲದೆ ರಾಜ್ಯ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿಯೂ ಸಹ ಅದರಲ್ಲಿ ಡಿಪಿಟಿ ಸ್ಟೇಟಸ್ ಚೆಕ್ ಮಾಡಬಹುದು. ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಆದ https://ahara.kar.nic.in/lpg/ಈ ವೆಬ್ ಸೈಟ್ ಗೆ ಭೇಟಿ ನೀಡಿ ಡಿಪಿಟಿ ಸ್ಟೇಟಸ್ ಚೆಕ್ ಮಾಡಬಹುದಾಗಿದೆ.
ಹೀಗೆ ನವೆಂಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ತಿಳಿದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- 15 ಲಕ್ಷ ಸಾಲ ಸ್ವಂತ ಉದ್ಯೋಗಕ್ಕಾಗಿ : ಅರ್ಧ ಹಣ ಸರ್ಕಾರ ಕಟ್ಟುತ್ತೆ ತಕ್ಷಣ ಅರ್ಜಿ ಸಲ್ಲಿಸಿ
- ಬರ ಪರಿಹಾರ ಹಣ ಪಡೆಯುವ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ