ನಮಸ್ಕಾರ ಸ್ನೇಹಿತರೇ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ 202324ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಸೌಲಭ್ಯಕ್ಕಾಗಿ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಯಾವ ತರಗತಿಯವರಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಯಾವ ದಿನಾಂಕದಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಾಗುತ್ತದೆ.

ವಿದ್ಯಾರ್ಥಿ ವೇತನ :
ವಿದ್ಯಾಸಿರಿ ಯೋಜನೆಯನ್ನು ಸರ್ಕಾರಿ ಹಾಗೂ ಖಾಸಗಿ ಅನುದ ಅಂತ ವಿದ್ಯಾರ್ಥಿ ನಿಲಯಗಳಿಂದ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ಜಾರಿಗೆ ತರಲಾಗಿದೆ. ಪ್ರತಿ ತಿಂಗಳಿಗೆ 1500 ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ಹದಿನೈದು ಸಾವಿರ ರೂಪಾಯಿಗಳು ಸಹಾಯ ಧನವನ್ನು ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯ ಮೂಲಕ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ ಜಮಾ ಮಾಡಲಾಗುತ್ತದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೊತ್ತ :
ಪ್ರತಿ ತಿಂಗಳಿಗೆ 1 500 ರೂಪಾಯಿಯಂತೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಈ ಯೋಜನೆಯ ಅಡಿಯಲ್ಲಿ ಒಟ್ಟು 15000 ರೂಪಾಯಿಗಳ ಸಹಾಯಧನವನ್ನು ಯಾವುದಾದರು ಕೋರ್ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ಮೂಲಕ ವಿದ್ಯಾರ್ಥಿಗಳು ಹಣವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಗೃಹಲಕ್ಷ್ಮಿ 5ನೇ ಕಂತಿನ ಹಣ ಬೇಕಾ ..? ತಪ್ಪದೆ ಈ 4 ಪ್ರಮುಖ ಕೆಲಸ ಮಾಡಲೇಬೇಕು ನೋಡಿ
ಅರ್ಜಿಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಪಿಯುಸಿ ಅಥವಾ ಪದವಿ ಸೆಮಿಸ್ಟರ್ ಮಾರ್ಕ್ಸ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಶಾಲಾ ಶುಲ್ಕದ ರಶೀದಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಕರ್ನಾಟಕ ಸರ್ಕಾರವು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ವಿದ್ಯಾರ್ಥಿಯು ಕರ್ನಾಟಕದ ಕಾಯ ನಿವಾಸಿ ಆಗಿರಬೇಕು ಹಾಗೂ ಹಿಂದುಳಿದ ವರ್ಗಕ್ಕೆ ವಿದ್ಯಾರ್ಥಿಗಳು ಸೇರಿದವರಾಗಿರಬೇಕು ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರು ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ಪಡೆಯಬಹುದು ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಗೂಗಲ್ ಪೇ ಬಳಸುವವರಿಗೆ ಸಿಗಲಿದೆ 1 ಲಕ್ಷ : ಹೇಗೆ ಪಡೆಯುವುದು ನೋಡಿ ಇಲ್ಲಿದೆ
- ನಿಮಗೂ ಗೃಹಲಕ್ಷ್ಮಿ 2,000ರೂ ಹಣ ಬಂದಿದೆಯ ನೋಡಿ, 5ನೇ ಕಂತಿನ ಹಣ ಬಿಡುಗಡೆ ಆಗಿದೆ