ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿಯನ್ನು ನೀಡಲಾಗುತ್ತಿದೆ. ಬರೋಬ್ಬರಿ 540 ಹುದ್ದೆ ಭರ್ತಿಗೆ ಅರಣ್ಯ ಇಲಾಖೆಯಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರಿ ಕೆಲಸವನ್ನು ಪಡೆಯಬಹುದಾಗಿದೆ. ಸಾಕಷ್ಟು ಯುವಕ ಯುವತಿಯರು ವಿದ್ಯಾಭ್ಯಾಸದ ನಂತರ ಉದ್ಯೋಗ ಸಿಗದೇ ಪರದಾಡುತ್ತಿರುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಆರ್ಥಿಕ ಸಮಸ್ಯೆಯಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚಿಗೆ ಓದಲು ಸಮಸ್ಯೆ ಆಗಿರುತ್ತದೆ ಹೆಚ್ಚಿನವರು ಪಿಯುಸಿವರೆಗೆ ಓದಿರುತ್ತಾರೆ ಅಂತವರಿಗಾಗಿ ಈ ಉದ್ಯೋಗವಕಾಶ ಎಂದು ಹೇಳಬಹುದು.
ಅರಣ್ಯ ಇಲಾಖೆಯಿಂದ ಹುದ್ದೆಗಳಿಗೆ ಭರ್ತಿ :
ಸುಮಾರು 540 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಕರ್ನಾಟಕ ಸರ್ಕಾರವು ಅರಣ್ಯ ಇಲಾಖೆಯಿಂದ ನಿರ್ಧರಿಸಿದ್ದು ಅದಕ್ಕಾಗಿ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ರಾಜ್ಯದ ಯಾವುದೇ ಭಾಗಕ್ಕೆ ನೇಮಕಗೊಂಡವರನ್ನು ನೇಮಿಸಬಹುದಾಗಿದೆ.
ಅರಣ್ಯ ಇಲಾಖೆಯ ಹುದ್ದೆಗಳಿಗೆ ವೇತನ :
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗೆ ಸಂಬಂಧಿಸಿದಂತೆ ವೇತನವನ್ನು ನೋಡುವುದಾದರೆ 32,600 ರೂಪಾಯಿಗಳವರೆಗೆ ಅರಣ್ಯ ಗಸ್ತು ಪಾಲಕರಾಧವ ಅರಣ್ಯ ರಕ್ಷಕ ಹುದ್ದೆಗೆ ವೇತನ ನಿಗದಿಪಡಿಸಲಾಗಿದೆ ಇದರ ಜೊತೆಗೆ ಪಿಂಚಣಿ ಸೌಲಭ್ಯ ವಿಶೇಷ ಭತ್ಯೆ ಹೀಗೆ ಕೆಲವೊಂದು ಸೌಲಭ್ಯಗಳನ್ನು ಕೂಡ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ :
ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು 18 ವರ್ಷ ಮೇಲ್ಪಟ್ಟವರು ಹಾಗೂ 27 ಕೆಳಗಿನವರು ಸಲ್ಲಿಸಬಹುದಾಗಿದೆ. ಐದು ವರ್ಷಗಳ ವಯೋಮಿತಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದಕ್ಕೆ ಸೇರಿರುವವರಿಗೆ ಸಡಲಿಕೆ ಮಾಡಲಾಗಿದೆ. ಮೂರು ವರ್ಷಗಳ ಸಡಿಲಿಕೆ ಹಿಂದುಳಿದ ವರ್ಗಗಳಿಗೆ ಮಾಡಲಾಗಿದೆ.
ಅರಣ್ಯ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಅವುಗಳೆಂದರೆ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಮೊಬೈಲ್ ನಂಬರ್ ಇಮೇಲ್ ಐಡಿ ಆಧಾರ್ ಕಾರ್ಡ್ ಪಿಯುಸಿ ಮಾರ್ಕ್ಸ್ ಕಾರ್ಡ್ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಗ್ರಾಮೀಣ ಭಾಗದ ಅಭ್ಯರ್ಥಿಯ ಪ್ರಮಾಣ ಪತ್ರ ಹಾಗೂ ಕನ್ನಡ ಮಾಧ್ಯಮ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಸುಲಭ ವಾಗಿದ್ದು ಅರಣ್ಯ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. https://kfdrecruitment.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಡಿಸೆಂಬರ್ 30 2013ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಜನವರಿ 5 2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ವಾಗಿರುತ್ತದೆ.
ಅರ್ಜಿ ಶುಲ್ಕ :
120 ರೂಪಾಯಿಗಳು ಪುರುಷ ಅಭ್ಯರ್ಥಿಗಳಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 70 ರೂಪಾಯಿಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅದರ ಜೊತೆಗೆ 220 ಪುರುಷ ಹಾಗೂ 120 ಮಹಿಳೆಯರಿಗೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಹೀಗೆ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಹಾಗೂ ಪಿಯುಸಿ ಮುಗಿಸಿದಂತಹ ಅಭ್ಯರ್ಥಿಗಳು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು