ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಸ್ ಎಸ್ ಎಲ್ ಸಿ ಪಾಸಾಗಿರುವ ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿಯನ್ನು ತಿಳಿಸಲಾಗುತ್ತಿದೆ. 202324ನೇ ಸಾಲಿನಲ್ಲಿ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಮಸಾಜಿಸ್ಟ್ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನ ಮಾಡಿದೆ.

ಮಸಾಜಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 2023 24ನೇ ಸಾಲಿನಲ್ಲಿ ಎಸ್ ಎಸ್ ಸಿ ಎಸ್ ಪಿ ಮತ್ತು ಎಸ್ ಪಿ ಯೋಜನೆಯಡಿಯಲ್ಲಿ ಮಸಾಜ್ ತರಬೇತಿಯನ್ನು ನೀಡಲು ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು ಅರ್ಜಿಯನ್ನು ಆಹ್ವಾನ ಮಾಡಿದೆ. ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಎಸ್ ಎಸ್ ಎಲ್ ಸಿ ಪಾಸಾಗಿರುವ 18ರಿಂದ 35 ವರ್ಷ ವಯಸ್ಸಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ತರಬೇತಿಯ ಅವಧಿ ಎರಡು ತಿಂಗಳಿಗಳಾಗಿದ್ದು, ಪರಿಶಿಷ್ಟ ಜಾತಿಯಿಂದ 20 ಫಲಾನುಭವಿಗಳು ಹಾಗೂ ಪರಿಶಿಷ್ಟ ಪಂಗಡದಿಂದ 20 ಫಲಾನುಭವಿಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.
ಅರ್ಹ ಫಲಾನುಭವಿಗಳಿಗೆ ಶಿಷ್ಯವೇತನ :
ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಕಚೇರಿಯಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಫಲಾನುಭವಿಗಳಿಗೆ ತರಬೇತಿ ಅವಧಿಯಲ್ಲಿ ಪ್ರತಿ ಮಾಹಿಯಾನ ತಲ 6,000ಗಳನ್ನು ಶಿಷ್ಯವೇತನವಾಗಿ ನೀಡಲಾಗುತ್ತದೆ. ಅಭ್ಯರ್ಥಿಗಳೇ ತರಬೇತಿ ಅವಧಿಯಲ್ಲಿ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಗೆ ಎರಡು ತಿಂಗಳುಗಳ ಕಾಲ ಕಡ್ಡಾಯವಾಗಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿ ಗಾಗಿ :
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಪ್ರಾಚಾರ್ಯರ ಕಚೇರಿ ದೂರವಾಣಿ ಸಂಖ್ಯೆಯಾದ 08182-223230 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಅಥವಾ ಟಿಎಸ್ಪಿ ನೋಡಲು ಅಧಿಕಾರಿಯ ಆದ ಪ್ರಶಾಂತ್ ಕೆ ಕೂಡ ಇವರನ್ನು ಸಹ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹೀಗೆ ಶಿವಮೊಗ್ಗದಲ್ಲಿ ಆಸಕ್ತ ಅಭ್ಯರ್ಥಿಗಳು ಮಸಾಜಿಸ್ಟ್ ತರಬೇತಿಯನ್ನು ಪಡೆದು ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಶಿವಮೊಗ್ಗ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ : ಹೊಸ ವರ್ಷಕ್ಕೂ ಮುನ್ನವೇ ಭರ್ಜರಿ ಗಿಫ್ಟ್
- ಪ್ರತಿ ತಿಂಗಳು 3000 ಪಿಂಚಣಿ ಸೌಲಭ್ಯ : ಈ ರೈತರಿಗೆ ಸಿಗಲಿದೆ ಈ ಕೂಡಲೇ ಅರ್ಜಿ ಸಲ್ಲಿಸಿ