ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ಸರ್ಕಾರವು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯಕವಾಗುವಂತಹ ಸ್ಕಾಲರ್ಶಿಪ್ ಬಿಡುಗಡೆ ಮಾಡುತ್ತಿದ್ದರು ಎಂಬುದರ ಬಗ್ಗೆ ತಿಳಿಸಲಾಗುತ್ತಿದೆ. ವಿಶೇಷ ವಿದ್ಯಾರ್ಥಿ ವೇತನವನ್ನು ವಿವಿಧ ಸಂಸ್ಥೆಗಳು ವಿವಿಧ ಕಂಪನಿಗಳು ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇವತ್ತಿನ ಲೇಖನದಲ್ಲಿ ಅದೇ ರೀತಿ ವಿಶೇಷ ಸ್ಕಾಲರ್ಷಿಪ್ನ ಬಗ್ಗೆ ತಿಳಿಸಲಾಗುತ್ತಿದೆ.
ವಿದ್ಯಾಸಿರಿ ಸ್ಕಾಲರ್ಶಿಪ್ :
ಕರ್ನಾಟಕ ಸರ್ಕಾರವು ವಿದ್ಯಾಸಿರಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ವಸತಿ ಮತ್ತು ಊಟವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಡುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಿದೆ. ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಇರುವ ಹಾಗೂ ಹಾಸ್ಟೆಲ್ ಗಳಲ್ಲಿ ಉಳಿದುಕೊಳ್ಳಲು ಅವಕಾಶ ಸಿಗದೇ ಇರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಊಟ ತಿಂಡಿ ವಸತಿ ಖರ್ಚು ಮಾಡಿ ಕೊಳ್ಳಲು ಈ ವಿದ್ಯಾರ್ಥಿ ವೇತನವನ್ನು ಆಕಾಶ ಕಲ್ಪಿಸುತ್ತದೆ. ಶೈಕ್ಷಣಿಕ ವರ್ಷ ಹತ್ತು ತಿಂಗಳವರೆಗೆ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ೧೫೦೦ ರೂಪಾಯಿಗಳನ್ನು ಅಂದರೆ ಜೂನ್ 2023 ರಿಂದ ಮಾರ್ಚ್ 2024ರವರೆಗೆ ಹದಿನೈದು ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಪಡೆದುಕೊಳ್ಳಬಹುದು. ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಅವರ ಬ್ಯಾಂಕ್ ಖಾತೆಗೆ 1500 ರೂಪಾಯಿಗಳನ್ನು ನೇರವಾಗಿ ಜಮಾ ಮಾಡಲಾಗುತ್ತದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನ ಪಡೆಯಲು ಇರುವ ಅರ್ಹತೆಗಳು :
ಕರ್ನಾಟಕ ಸರ್ಕಾರದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಅವುಗಳೆಂದರೆ ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿ ಆಗಿರಬೇಕು. ಎಸ್ ಸಿ ,ಎಸ್ ಟಿ ,ಒ ಬಿ ಸಿ ಮೊದಲಾದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಈ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. 2.50 ಲಕ್ಷಕ್ಕಿಂತ ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ 1 ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಮೀರಬಾರದು ಹಾಗೂ ಒಂದು ಲಕ್ಷ ರೂಪಾಯಿಗಳು ಓಬಿಸಿ ಕುಟುಂಬದ ವಾರ್ಷಿಕ ಆದಾಯ ಮೀರಿರಬಾರದು.
ಕನಿಷ್ಠ ಎರಡು ವರ್ಷವಾದರೂ ಕರ್ನಾಟಕದಲ್ಲಿ ವಿದ್ಯಾರ್ಥಿಗಳು ಓದಿರಬೇಕು ಹಾಗೂ ಎಪ್ಪತ್ತೈದರಷ್ಟು ಹಾಜರಾತಿಯನ್ನು ಶೈಕ್ಷಣಿಕ ವರ್ಷದಲ್ಲಿ ಹೊಂದಿರಬೇಕು. ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದ ಅಡಿಯಲ್ಲಿ ವಿದ್ಯೆ ಕೋರ್ಸ್ ಮಾಡುತ್ತಿರಬೇಕು. ವಿದ್ಯಾಸಿರಿ ವಿದ್ಯಾರ್ಥಿ ವೇತನ ಕೇವಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಸಿಗಲಿದ್ದು ವ್ಯಾಸಂಗ ಮಾಡುತ್ತಿರುವ ಕಾಲೇಜು ಅಥವಾ ಶಿಕ್ಷಣ ಸಂಸ್ಥೆ 5 ಕಿ.ಮೀ ದೂರದಲ್ಲಿ ಇರಬೇಕು.
ಇದನ್ನು ಓದಿ : ನಾಡ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸ್ಥಳೀಯರಿಗೆ ಮೊದಲ ಆಧ್ಯತೆ
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಇರುವ ಅಗತ್ಯ ದಾಖಲೆ :
ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಪಿಯುಸಿ ಅಥವಾ ಪದವಿ ಸೆಮಿಸ್ಟರ್ ಅಂಕಪಟ್ಟಿ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳು ಹೊಂದಿರಬೇಕು.
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ v
ವಿದ್ಯಾಶ್ರೀ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. https://bcwd.karnataka.gov.in/info-2/Scholarships/Vidyasiri/kn ಈ ವೆಬ್ಸೈಟ್ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿಯೇ ಈ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದ್ದು 1500 ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು,
ಇತರೆ ವಿಷಯಗಳು :
- ರಾಜ್ಯದ ವಿದ್ಯಾರ್ಥಿಗಳಿಗೆ 35,000 ಪ್ರೋತ್ಸಾಹ ಧನ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ
- BPL ಕಾರ್ಡ್ ಇರುವವರಿಗೆ 5 ಲಕ್ಷ ಹಾಗೂ APL ಕಾರ್ಡ್ ಇರುವವರಿಗೆ 1.5 ಲಕ್ಷ ಉಚಿತ