ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಉಚಿತವಾಗಿ ಸರ್ಕಾರದಿಂದ ನೀಡಲಾಗುವ ವಿವಿಧ ಉಪಕರಣಗಳಿಗಾಗಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ. ವಿವಿಧ ಉಪಕರಣಗಳನ್ನು ಉಚಿತವಾಗಿ ಸರ್ಕಾರವು ನೀಡಲಾಗುತ್ತಿದ್ದು ಅರ್ಹತೆ ಹೊಂದಿರುವ ಎಲ್ಲಾ ಫಲಾನುಭವಿಗಳು ಇಲಾಖೆ ನಿಗದಿಪಡಿಸಿರುವ ದಿನಾಂಕದೊಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಪಕರಣಗಳನ್ನು ಪಡೆಯಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು :
ಅರ್ಹ ಗ್ರಾಮೀಣ ಪ್ರದೇಶದ ಬಡಗಿತನ ಗೌಂಡಿ ಕ್ಷೌರಿಕ ಮತ್ತು ಧೋಬಿ ವೃತ್ತಿಯ ಕುಶಲಕರ್ಮಿಗಳಿಂದ ಉಚಿತವಾಗಿ ಉಪಕರಣಗಳನ್ನು ಪಡೆಯಲು ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ ಜಿಲ್ಲಾ ಪಂಚಾಯತ್ ಕಚೇರಿಯಿಂದ 202324ನೇ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯ ಅಡಿಯಲ್ಲಿ ಸರ್ಕಾರವು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. 18 ರಿಂದ 55 ವರ್ಷ ವಯಸ್ಸಿನ ಫಲಾನುಭವಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಅವಶ್ಯಕತೆಗಳನ್ನು ಕಚೇರಿಗೆ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. https://vijayapura.nic.in ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನು ಓದಿ : ಲೋಕಸಭೆ ಚುನಾವಣೆ ಕಾರಣ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ ನೋಡಿ
ದಿನಾಂಕಗಳು :
31-12-2023 ರಂದು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-02-2024 ಈ ದಿನ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಜ್ಜಿಯನ್ನು ಸಲ್ಲಿಸಲು ಕಚೇರಿ ವಿಳಾಸ
ಉಪನಿರ್ದೇಶಕರವರ,
ಕಚೇರಿ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ ,
ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ ಸ್ಟೇಷನ್ ಬ್ಯಾಕ್ ರೋಡ್, ಶಿಕಾರಖಾನೆ ವಿಜಯಪುರ 586104
ಹೆಚ್ಚಿನ ಮಾಹಿತಿಗಾಗಿ :
- ಉಪ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08352-254851
- ಕೈಗಾರಿಕಾ ವಿಸ್ತರಣಾಧಿಕಾರಿಗಳು ವಿಜಯಪುರ ಅಥವಾ ಸಿಂದಗಿ ಅಥವಾ ಇಂಡಿ 9972162222
- ಬಾಗೇವಾಡಿ ಅಥವಾ ಮುದ್ದೇಬಿಹಾಳ 9945779798 ಈ ಸಂಖ್ಯೆಗೆ ಕರೆ ಮಾಡಿ ಈ ಯೋಜನೆಯ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಹೀಗೆ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ ಜಿಲ್ಲಾ ಪಂಚಾಯತ್ ಕಚೇರಿಯಿಂದ ಅರ್ಹ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತ ಉಪಕರಣಗಳನ್ನು ನೀಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ : ತಿದ್ದುಪಡಿ ಅವಕಾಶ ನೀಡಲಾಗಿದೆ
- ಕರ್ನಾಟಕದಲ್ಲಿ ಕೋವಿಡ್ ಟೆಸ್ಟ್ ಇಂತಹ ಜನರಿಗೆ ಕಡ್ಡಾಯ : ಸರ್ಕಾರದಿಂದ ಹೊಸ ಆದೇಶ