ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಸರ್ಕಾರವು ಪ್ರತಿ ತಿಂಗಳು ಅಕ್ಕಿ ಹಣವನ್ನು ಬಿಡುಗಡೆ ಮಾಡುತ್ತಿದ್ದು ಆ ಹಕ್ಕಿಯ ಹಣ ಬಂದಿದೆಯ ಇಲ್ಲವೇ ಎಂಬುದರ ಬಗ್ಗೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.
ಅನ್ನಭಾಗ್ಯ ಯೋಜನೆ :
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿಡುಗಡೆಯಾಗುವ ಹಕ್ಕಿಯ ಹಣದ ಸ್ಟೇಟಸ್ ಅನ್ನು ಯಾವ ರೀತಿ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು ಎನ್ನುವುದರ ಸುಲಭ ವಿಧಾನವನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದು. ಕರ್ನಾಟಕ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಲ್ಲಿ ಪ್ರಮುಖ ಯೋಜನೆ ಅನ್ನ ಭಾಗ್ಯ ಯೋಜನೆಯಾಗಿದೆ. ಪ್ರತಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರವು ನೀಡುವುದಾಗಿ ಘೋಷಣೆ ಮಾಡಿತ್ತು ಆದರೆ 10 ಕೆಜಿ ಅಕ್ಕಿಯನ್ನು ಹೊಂದಿಸಲು ಅಕ್ಕಿ ದಾಸ್ತಾನು ಕೊರತೆಯಿಂದ ಸಾಧ್ಯವಾಗಿಲ್ಲ. ಹೀಗಾಗಿ 10 ಕೆಜಿ ಅಕ್ಕಿಗೆ ಬದಲಿಗೆ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿಗೆ ನಗದು ಹಣವನ್ನು ಕಳೆದ ಮೂರು ತಿಂಗಳಿಂದ ಸರ್ಕಾರ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡುತ್ತಿದೆ.
ಇದನ್ನು ಓದಿ : ಕೇಂದ್ರ ಸರ್ಕಾರದಿಂದ ಕ್ಯಾಶ್ ಬ್ಯಾಕ್ ಯೋಜನೆ : ಹೆಚ್ಚಿನ ಮಾಹಿತಿಗಾಗಿ ಓದಿ
ಮೊಬೈಲ್ ನಲ್ಲಿಯೇ ತೆಗೆದುಕೊಳ್ಳುವ ವಿಧಾನ :
ನೀವೇನಾದರೂ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದರೆ ನವೆಂಬರ್ ತಿಂಗಳ ಹಣವು ನಿಮಗೆ ಬಂದಿದೆಯೇ ಇಲ್ಲವೇ ಎಂಬುದನ್ನು ಮೊಬೈಲ್ನಲ್ಲಿಯೇ ಸುಲಭವಾಗಿ ತಿಳಿದುಕೊಳ್ಳಬಹುದು. ನೀವು ನಿಮ್ಮ ಮೊಬೈಲ್ ನಲ್ಲಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಡಿವಿಟಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಮೊದಲಿಗೆ ನೀವು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
https://ahara.kar.nic.in/Home/EServices ಮುಖಪುಟದಲ್ಲಿ ಸ್ಟೇಟಸ್ ಎನ್ನುವ ಆಯ್ಕೆ ನಿಮಗೆ ಕಾಣುತ್ತದೆ ಅದರಲ್ಲಿ ಡಿಬಿಟಿ ಸ್ಟೇಟಸ್ ಎನ್ನುವ ಆಯ್ಕೆಯನ್ನು ಮಾಡಿಕೊಂಡು ಅದರಲ್ಲಿ ನಿಮ್ಮ ಜಿಲ್ಲೆ ಸೆಲೆಕ್ಟ್ ಮಾಡಿಕೊಳ್ಳುವುದರ ಮೂಲಕ ಡಿವಿಟಿ ಸ್ಟೇಟಸ್ ಅನ್ನು ಆಯ್ಕೆ ಮಾಡಿಕೊಳ್ಳಬಹುದು. ಅದಾದ ನಂತರ ನೀವು ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತಹ ಎಲ್ಲಾ ಸದಸ್ಯರ ಹೆಸರು ಬರುತ್ತದೆ ಹಾಗೂ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ನಮ್ಮ ಮೊಬೈಲ್ ನಲ್ಲಿಯೇ ಸುಲಭವಾಗಿ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದ್ದು ಯಾವುದೇ ರೀತಿಯ ಸೇವಾ ಕೇಂದ್ರಗಳಿಗೆ ಭೇಟಿ ನೀಡದೆ ಮನೆಯಲ್ಲಿಯೇ ಕುಳಿತು ಸುಲಭವಾಗಿ ಅನ್ನಭಾಗ್ಯ ಯೋಜನೆಯ ಹಣ ಬಂದಿದೆಯ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದರೆ ಅವರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ರೈತರಿಗೆ ಗುಡ್ ನ್ಯೂಸ್ : ಈ ಹೊಸ ಯೋಜನೆಯಲ್ಲಿ ರೈತರಿಗೆ ಹಣ ಸಿಗುತ್ತದೆ
ಟ್ರೂ ಕಾಲರ್ ಬಳಸುವವರು ತಪ್ಪದೆ ನೋಡಿ : ಕಾದಿದೆ ಶಾಕ್ ನಿಮ್ಮಗಾಗಿ