ನಮಸ್ಕಾರ ಸ್ನೇಹಿತರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದ ರೈತರು ಮತ್ತೊಮ್ಮೆ ಕೃತಜ್ಞತೆ ತಿಳಿಸುತ್ತಿದ್ದಾರೆ. ಸಾಕಷ್ಟು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದರು ಕೂಡ ಹಕ್ಕು ಪತ್ರ ತಮ್ಮ ಹೆಸರಿಗೆ ಆಗಿಲ್ಲವೆಂದು ಬೇಸರಗೊಂಡಿದ್ದ ರೈತರಿಗೆ ಕರ್ನಾಟಕ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದೆ.
ರೈತನಿಗೆ ಜಮೀನಿನ ಒಡೆಯ ಎನ್ನುವ ಕಾನೂನನ್ನು ಸರ್ಕಾರ ಮತ್ತೊಮ್ಮೆ ಸಕ್ರಿಯಗೊಳಿಸಿದ್ದು ಸರ್ಕಾರಿ ಭೂಮಿಯಲ್ಲಿ ಬೋರ್ ರಹಿತ ಕೃಷಿಕರು ಸಾಕಷ್ಟು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಈಗಾಗಲೇ ತಮಗೆ ಹಕ್ಕುಪತ್ರ ನೀಡುವಂತೆ ಸಾಕಷ್ಟು ಅರ್ಜಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು ಕೂಡ ಹಕ್ಕು ಪತ್ರ ಕಳೆದ ವರ್ಷಗಳಿಂದ ವಿತರಣೆ ಸರಿಯಾಗಿ ನಡೆದಿಲ್ಲ. ಇದೀಗ ರಾಜ್ಯ ಸರ್ಕಾರವು ರೈತರಿಗೆ ಬಗರ್ ಹುಕುಂ ಯೋಜನೆಯಡಿಯಲ್ಲಿ ಹಕ್ಕುಪತ್ರ ವಿತರಣೆ ಮಾಡಲು ಕ್ರಮ ಕೈಗೊಂಡಿದೆ.

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವವರಿಗೆ ಹಕ್ಕು ಪತ್ರ :
ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವ ಕೃಷಿಕರನ್ನು ಜಮೀನಿನ ಮಾಲೀಕರನ್ನಾಗಿ ಮಾಡುವ ಬಗ್ಗೆ ಇತ್ತೀಚಿಗೆ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಸುಮಾರು 31 1864 ಹೆಕ್ಟರ್ ಭೂಮಿಯನ್ನು ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಪಡೆದುಕೊಳ್ಳಲು 13750 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ. ಇವುಗಳಲ್ಲಿ ಸರ್ಕಾರವು ಸುಮಾರು ಏಳು ಸಾವಿರ ಅರ್ಜಿಗಳನ್ನು ಪರಿಶೀಲನೆ ನಡೆಸಿ ಹಕ್ಕು ಪತ್ರ ವಿತರಣೆ ಮಾಡಲು ನಿರ್ಧರಿಸಿದೆ ಎಂದು ಮಾನ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮಾಹಿತಿ ತಿಳಿಸಿದ್ದಾರೆ.
ಇದನ್ನು ಓದಿ : ಮಕ್ಕಳಿಗೆ ತಾಯಿಯ ತವರು ಮನೆಯಿಂದ ಆಸ್ತಿ ಸಿಗುತ್ತದೆಯಾ ? ಕಾನೂನು ಏನು ಹೇಳುತ್ತದೆ ?
ಬಗರ್ ಹುಕುಂ ಯೋಜನೆ :
ಅರಣ್ಯ ಪ್ರದೇಶದಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ 1980 ಕ್ಕಿಂತ ಮೊದಲು ಸಾಗುವಳಿ ಮಾಡುತ್ತಿರುವ ರೈತರ ಅರ್ಜಿಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರವು ಸುಮಾರು 7,000 ಹಕ್ಕು ಪತ್ರ ವಿತರಣೆಗೆ ನಿರ್ಧರಿಸಿದೆ.
ಆದರೆ ಅವರೇನಾದರೂ ಮೂರು ಎಕರೆ ಜಮೀನಿಗಿಂತ ಹೆಚ್ಚಿಗೆ ಜಮೀನಿಗೆ ಹಕ್ಕು ಪತ್ರ ನೀಡಲು ಸಲ್ಲಿಸಿದ್ದರೆ ಅಂತವರಿಗೆ ಹಕ್ಕು ಪತ್ರ ನೀಡಲು ಸಾಧ್ಯವಾಗುವುದಿಲ್ಲ ಎಂದು ಸಚಿವರು ಹಕ್ಕು ಪತ್ರದ ಬಗ್ಗೆ ಸ್ಪಷ್ಟನೆ ತಿಳಿಸಿದ್ದಾರೆ. ಜನವರಿ ಅಂತ್ಯದ ಒಳಗಾಗಿ ಹಕ್ಕು ಪತ್ರವನ್ನು ಫಲಾನುಭವಿ ರೈತರು ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಈ ಹಕ್ಕು ಪತ್ರವನ್ನು ಮಲೆನಾಡು ಭಾಗದಲ್ಲಿ ಹಾಗೂ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ವಿತರಣೆ ಮಾಡಲಾಗುತ್ತದೆ.
ಹೀಗೆ ರಾಜ್ಯ ಸರ್ಕಾರವು ಅರಣ್ಯ ಪ್ರದೇಶದಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಹಕ್ಕುಪತ್ರ ವಿತರಣೆ ಮಾಡಲು ನಿರ್ಧರಿಸಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಯಾರಾದರೂ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ಹಕ್ಕು ಪತ್ರ ವಿತರಣೆ ಮಾಡುತ್ತದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ