ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಸ್ವಂತ ಉದ್ಯೋಗ ಮಾಡಲು ಬಯಸುತ್ತಿದ್ದರೆ ಸರಕಾರದಿಂದ ಧನ ಸಹಾಯ ಲಭ್ಯವಿದೆ . ಎಂಬುದರ ಬಗ್ಗೆ ತಿಳಿಸಲಾಗುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದ್ದು. ಈ ಯೋಜನೆಗೆ ಸಂಬಂಧಿಸಿ ದಂತೆ ಸರ್ಕಾರವು ಏನು ನೀಡುತ್ತಿದೆ ಎಂಬುದರ ಮಾಹಿತಿಯನ್ನು ನೋಡಬಹುದು. ಸ್ವಾವಲಂಬಿ ಸಾರಥಿ ಯೋಜನೆಗೆ ದಾಖಲೆಗಳು ಯಾವುವು ಹಾಗೂ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.
ಸ್ವಾವಲಂಬಿ ಸಾರಥಿ ಯೋಜನೆ :
ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ಯುವಕರನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ಸರ್ಕಾರವು ವಾಹನಗಳ ಮೇಲೆ ಸಬ್ಸಿಡಿಯನ್ನು ನೀಡುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆ ಎಂಬ ಹೊಸ ಯೋಜನೆಯನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾರಂಭಿಸಲು ನಿರ್ಧರಿಸಿದ್ದಾರೆ. ಈ ಯೋಜನೆಯ ಅಡಿಯಲ್ಲಿ ದರ ಪ್ರಯೋಜನವನ್ನು ಎಸ್‌ಸಿ ಮತ್ತು ಎಸ್ ಟಿ ಗಳ ನಿರುದ್ಯೋಗಿ ಯುವಕರು ಪಡೆಯುತ್ತಾರೆ. 4 ಚಕ್ರವಾಹನಗಳನ್ನು ಸ್ವಯಂ ಉದ್ಯೋಗ ಪಡೆಯಲು ಈ ಯೋಜನೆಯಡಿಯಲ್ಲಿ ಖರೀದಿಸಲು ರಾಜ್ಯ ಸರ್ಕಾರವು ಸಹಾಯಧನವನ್ನು ಒದಗಿಸುತ್ತದೆ. ಶೇಕಡಾ 50% ರಿಂದ 70% ವರೆಗೆ ನಿರುದ್ಯೋಗ ಯುವಕರಿಗೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿಯನ್ನು ಒದಗಿಸುತ್ತದೆ. ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಫಲಾನುಭವಿಗಳಿಗೆ ಸಹಾಯಧನವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸರ್ಕಾರವು ಜಮ ಮಾಡುತ್ತದೆ.
ಸ್ವಾವಲಂಬಿ ಸಾರಥಿ ಯೋಜನೆಯ ವಿಶೇಷತೆಗಳು :
ಕರ್ನಾಟಕ ಸರ್ಕಾರವು ಸ್ವಾವಲಂಬಿ ಸಾರಥಿ ಯೋಜನೆ ಎಂಬ ಹೊಸ ಯೋಜನೆಯನ್ನು ಪರಿಚಯಿಸುತ್ತಿದ್ದು ಉದ್ಯೋಗದ ವ್ಯವಸ್ಥೆಯನ್ನು ರಾಜ್ಯದ ನಿರುದ್ಯೋಗಿ ನಾಗರಿಕರಿಗೆ ಈ ಯೋಜನೆ ಮಾಡುತ್ತದೆ. ಈ ಯೋಜನೆಯ ಲಾಭವನ್ನು ಸ್ವಂತ ಉದ್ಯೋಗ ಆರಂಭಿಸಲು ಬಯಸುವ ಯುವಕರು ಪಡೆಯಬಹುದಾಗಿದೆ. ರಾಜ್ಯದಲ್ಲಿನ ನಿರುದ್ಯೋಗ ದರವನ್ನು ಕಡಿಮೆ ಮಾಡುವ ಉದ್ದೇಶವನ್ನು ಸ್ವಾವಲಂಬಿಸಾರಥಿ ಯೋಜನೆಯನ್ನು ಹೊಂದಿದೆ. ಶೇಕಡ 75ರಷ್ಟು ಸಬ್ಸಿಡಿ ಎಂದು ನಾಲ್ಕು ಲಕ್ಷ ರೂಪಾಯಿಗಳವರೆಗೆ ಎಸ್ ಸಿ ,ಎಸ್ ಟಿ ಗಳಿಗೆ ಯೋಜನೆಯ ಅಡಿಯಲ್ಲಿ ಒದಗಿಸಲಾಗುತ್ತದೆ. ಶೇಕಡಾ 50ರಷ್ಟು ಸಬ್ಸಿಡಿಯನ್ನು ಮೂರು ಲಕ್ಷಗಳವರೆಗೆ ಅಲ್ಪಸಂಖ್ಯಾತರಿಗೆ ವಾಹನ ಖರೀದಿಗೆ ಒದಗಿಸಲಾಗುತ್ತದೆ.
ಸ್ವಾವಲಂಬಿ ಸಾರಥಿ ಯೋಜನೆಗೆ ಇರಬೇಕಾದ ಅರ್ಹತೆಗಳು :
ಕರ್ನಾಟಕ ರಾಜ್ಯ ಸರ್ಕಾರದ ಸಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಆಗಿರಬೇಕು. ರಾಜ್ಯ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಅಥವಾ ಎಸ್ ಸಿ ಎಸ್ ಟಿ ವರ್ಗಕ್ಕೆ ಅರ್ಜಿದಾರರು ಸೇರಿದವರಾಗಿರಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸಲು 18 ಮತ್ತು 55 ವರ್ಷಗಳ ನಡುವೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 4.5 ಲಕ್ಷ ರೂಪಾಯಿಗಳುವರೆಗೆ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಇರಬೇಕು. ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿರಬಾರದು. ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್ ಅನ್ನು ಪಡೆದಿರಬೇಕು.
ಇದನ್ನು ಓದಿ : ಎರಡು ರೂಪಾಯಿ ದಿನಕ್ಕೆ ಉಳಿಸಿ ಪ್ರತಿ ವರ್ಷ 36 ಪಿಂಚಣಿ ಪಡೆಯಿರಿ
ಸ್ವಾವಲಂಬಿ ಸಾರಥಿ ಯೋಜನೆಗೆ ಅಗತ್ಯವಾದ ದಾಖಲೆಗಳು :
ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆನ್ಲೈನ್ ನಲ್ಲಿ ಸಲ್ಲಿಸಿದ ಅಪ್ಲಿಕೇಶನ್ ಎರಡು ಪಾಸ್ಪೋರ್ಟ್ ಸೈಜ್ ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಡ್ರೈವಿಂಗ್ ಲೈಸೆನ್ಸ್ ಕ್ಯಾಂಪಸ್ ಬುಕ್ ಹಾಗೂ ಈ ಯೋಜನೆಯ ಅಡಿಯಲ್ಲಿ ಸಾಲದ ಅವಧಿಯಲ್ಲಿ ಪಡೆದ ವಾಹನವನ್ನು ವರ್ಗಾವಣೆ ಮಾಡಿದಿರುವ ಬಗ್ಗೆ ಅಫಿಡವಿಟ್.
ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಸ್ವಾವಲಂಬಿ ಸಾರಥಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ಕಲ್ಪಿಸಲಾಗಿದ್ದು ಅಧಿಕೃತ ವೆಬ್ಸೈಟ್ ಎಂದರೆ https://kmdc.karnataka.gov.inಈ ವೆಬ್ ಸೈಟ್ ನ ಮೂಲಕ ಆನ್ಲೈನ್ ನಲ್ಲಿ ಅಭ್ಯರ್ಥಿಗಳು ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ನಿರುದ್ಯೋಗದಲ್ಲಿರುವ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸುವ ಯುವಕರಿಗೆ ಸ್ವಾವಲಂಬಿ ಸಾರಥಿ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಸಂಪೂರ್ಣ ಪ್ರಯೋಜನವನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಪಡೆದುಕೊಳ್ಳಬಹುದು ಎಂಬುದರ ಮಾಹಿತಿಯನ್ನು ಶೇರ್ ಮಾಡಿ.
ಇತರೆ ವಿಷಯಗಳು :
ಮನೆ ಕಟ್ಟುವವರೇ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ಸಿಗುತ್ತೆ
ರೈತರ ಸಾಲ ಮನ್ನಾ ಸರ್ಕಾರದಿಂದ ಬಂಪರ್ ಕೊಡುಗೆ , ಪಟ್ಟಿ ಬಿಡುಗಡೆ