ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯಮ ಆರಂಭಿಸಬೇಕು ಎನ್ನುವವರಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ ಅದೇನೆಂದರೆ ನೀವೇನಾದರೂ ಬಟ್ಟೆ ಹೊಲಿಯುವ ಕಲೆ ಚೆನ್ನಾಗಿ ತಿಳಿದಿದ್ದರೆ ಸ್ವಂತ ಶಾಪನ್ನು ಕೇಂದ್ರ ಸರ್ಕಾರವು ತಂದಿರುವ ಈ ಯೋಜನೆಯ ಮೂಲಕ ಪ್ರಾರಂಭಿಸಬಹುದಾಗಿದೆ. ವಿಶ್ವಕರ್ಮ ಯೋಜನೆಯ ಅಂಗವಾಗಿ ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಮಷೀನ್ ವಿತರಣೆ ಮಾಡಲು ನಿರ್ಧರಿಸಿದೆ.
ಕೇಂದ್ರ ಸರ್ಕಾರದಿಂದ 15000 ಸಹಾಯಧನ :
ಇತ್ತೀಚಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು ಸ್ವಂತ ಹೊಲಿಗೆ ಯಂತ್ರವನ್ನು ಇಟ್ಟುಕೊಂಡು ತಮ್ಮದೇ ಆಗಿರುವಂತಹ ಉದ್ಯಮವನ್ನು ಆರಂಭಿಸಲು ಬಯಸುವವರಿಗೆ ಈ ಯೋಜನೆಯಡಿಯಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ 15 ಸಾವಿರ ರೂಪಾಯಿಗಳನ್ನು ಕೇಂದ್ರ ಸರ್ಕಾರ ಜಮಾ ಮಾಡುತ್ತದೆ. ಇದರ ಜೊತೆಗೆ 20,000 ಸಾಲವನ್ನು ಕೂಡ ಪಡೆದುಕೊಳ್ಳಬಹುದಾಗಿತ್ತು ಹೊಲಿಗೆ ಯಂತ್ರ ಖರೀದಿಗೆ ಕೇಂದ್ರ ಸರ್ಕಾರದಿಂದ ಹಣವನ್ನು ಸುಲಭವಾಗಿ ಪಡೆಯಬಹುದು.
ಹೊಲಿಗೆ ಯಂತ್ರ ಖರೀದಿ ಮಾಡಲು ಯಾರೆಲ್ಲಾ ಅರ್ಹರಿದ್ದಾರೆ :
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವ ಉಚಿತ ಹೊಲಿಗೆ ಯಂತ್ರ ನೀವು ವಿತರಣೆ ಮಾಡಲು ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು ಪುರುಷ ಹಾಗೂ ಮಹಿಳೆಯರು ಯಾರು ಬೇಕಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಟೈಲರಿಂಗ್ ವೃತ್ತಿ ಮಾಡಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಂಡಿರುವವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅಗತ್ಯವಿರುವ ದಾಖಲೆಗಳು :
ಉಚಿತ ಹೊಲಿಗೆ ಯಂತ್ರ ಖರೀದಿಗೆ ಸಹಾಯಧನವನ್ನು ಕೇಂದ್ರ ಸರ್ಕಾರದಿಂದ ಪಡೆದುಕೊಳ್ಳಬೇಕಾದರೆ ಅಭ್ಯರ್ಥಿಯು ಆಧಾರ್ ಕಾರ್ಡ್, ವಿಳಾಸ ಪುರಾವೆ ಜಾತಿ ಪ್ರಮಾಣ ಪತ್ರ ವಿಶ್ವಕರ್ಮ ಐಡಿ ಆದಾಯ ಪ್ರಮಾಣ ಪತ್ರ ವೃತ್ತಿ ಬಗ್ಗೆ ದೃಢೀಕರಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಈ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಉಚಿತ ಹೊಲಿಗೆ ಯಂತ್ರ ಪಡೆಯಲು ಅಭ್ಯರ್ಥಿಯು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://pmvishwakarma.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೇಂದ್ರ ಸರ್ಕಾರವು ಇದೀಗ ಪುರುಷ ಹಾಗೂ ಮಹಿಳೆಯರಿಗೆ ಒಟ್ಟಾಗಿ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಯಾರೆಲ್ಲ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಲು ಯೋಚಿಸುತ್ತಿರುತ್ತಾರೆ ಅವರೆಲ್ಲ ಪಡೆಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರಿಗೆ ಕೇಂದ್ರ ಸರ್ಕಾರದಿಂದ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ 15000 ಸಹಾಯ ಧನ ಸಿಗಲಿದೆ ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆ : ಅರ್ಜಿ ಸಲ್ಲಿಸಲು ಡೈರೆಕ್ಟರ್ ಲಿಂಕ್ ಇಲ್ಲಿದೆ
- ನಿಮ್ಮ ಖಾತೆಗೆ ಬೆಳೆ ಪರಿಹಾರದ ಹಣ ಬಂದಿದೆಯ ನೋಡಿ ! ಈ ಕೂಡಲೇ ಚೆಕ್ ಮಾಡಿಕೊಳ್ಳಿ