ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಕಾಡದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಆಗಿನ ಕಾಲದಲ್ಲಿ ಹೆಣ್ಣು ಮಕ್ಕಳು ಹುಟ್ಟಿದರೆ ತುಂಬಾ ಖರ್ಚು ಎಂದು ಹೇಳಲಾಗುತ್ತಿತ್ತು ಆದರೆ ಇದೀಗ ಖರ್ಚುಗಳು ಹೆಣ್ಣು ಹುಟ್ಟಲಿ ಅಥವಾ ಗಂಡು ಹುಟ್ಟಲಿ ಸರಿಸಮಾನವಾಗಿರುತ್ತದೆ.
ಆದರೆ ಆರ್ಥಿಕವಾಗಿ ಹೆಣ್ಣು ಮಕ್ಕಳನ್ನು ಸದೃಢರನ್ನಾಗಿ ಮಾಡಲು ಹಾಗೂ ಹೆಣ್ಣು ಮಕ್ಕಳ ತಂದೆ ತಾಯಿಯ ಜವಾಬ್ದಾರಿಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡುವ ಉದ್ದೇಶದಿಂದ ಈಗಾಗಲೇ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈ ಯೋಜನೆಗಳಿಗೆ ಕೈಜೋಡಿಸಿದ್ದು , ಹೆಣ್ಣು ಮಕ್ಕಳ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಉಳಿಸಬಹುದಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆ :
ಸುಕನ್ಯಾ ಸಮೃದ್ಧಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳ ಹೆಸರಿನಲ್ಲಿ 15 ಲಕ್ಷ ರೂಪಾಯಿಯನ್ನು ಉಳಿಸಬಹುದಾಗಿದೆ. ಅಲ್ಲದೆ ಹೆಣ್ಣು ಮಕ್ಕಳಿಗಾಗಿ ದೊಡ್ಡ ಮೊತ್ತದ ಹಣ ಉಳಿಸಲು ಇರುವ ಯೋಜನೆಗೆ ಇದಾಗಿದ್ದು ಈ ಯೋಜನೆಯ ಮೂಲಕ ತಂದೆ ತಾಯಿಯ ಜವಾಬ್ದಾರಿಯನ್ನು ಸರ್ಕಾರವು ಕಡಿಮೆ ಮಾಡುತ್ತಿದೆ. ಕೇಂದ್ರ ಸರ್ಕಾರದಿಂದ ಸುಕನ್ಯಾ ಸಮೃದ್ಧಿ ಯೋಜನೆಯು ಪ್ರಾರಂಭವಾಗಿದ್ದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಈ ಯೋಜನೆಯ ಅಡಿಯಲ್ಲಿ ಪೋಸ್ಟ್ ಆಫೀಸ್ ಅಥವಾ ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಬಹುದಾಗಿದೆ.
ಇದನ್ನು ಓದಿ : ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?
ಈ ಯೋಜನೆ 21 ವರ್ಷದ ಯೋಜನೆಯಾಗಿದ್ದು 15 ವರ್ಷದವರೆಗೆ ಪ್ರತಿವರ್ಷದವರೆಗೂ ಹಣವನ್ನು ಠೇವಣಿ ಮಾಡಬೇಕಾಗುತ್ತದೆ. ಶೇಕಡಾ 8ರಷ್ಟು ಬಡ್ಡಿ ದರವು ವಾರ್ಷಿಕ ಸುಕನ್ಯಾ ಸಮೃದ್ಧಿ ಯೋಜನೆ ಯಲ್ಲಿ ಇದ್ದು ಸಂಪೂರ್ಣವಾಗಿ ಈ ಬಡ್ಡಿಯು ತೆರಿಗೆ ಮುಕ್ತವಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಖಾತೆಯನ್ನು ತೆರೆಯುವ ಸಂದರ್ಭದಲ್ಲಿ ಪೋಷಕರು ಮಗುವಿನ ಜನ್ಮ ಪ್ರಮಾಣ ಪತ್ರ ಹಾಗೂ ಹೆಣ್ಣು ಮಗುವಿನ ಗುರುತಿನ ಚೀಟಿ ಮತ್ತು ಪೋಷಕರ ಗುರುತಿನ ಚೀಟಿಯನ್ನು ಸಲ್ಲಿಸಬೇಕಾಗುತ್ತದೆ.
ಎಷ್ಟು ಹೂಡಿಕೆ ಮಾಡಬಹುದು ?
ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆದ ನಂತರ ಕನಿಷ್ಠ 250 ರೂಪಾಯಿಗಳವರೆಗೆ ತಿಂಗಳಿಗೆ ಖಾತೆಯನ್ನು ತೆರೆಯಬಹುದಾಗಿದೆ. ಮುಕ್ತಾಯದ ವೇಳೆಗೆ ಗರಿಷ್ಠ ಮೊತ್ತವೇನಾದರೂ ಇದ್ದರೆ ಪ್ರತಿ ತಿಂಗಳು ಹೂಡಿಕೆ ಮಾಡಿದಂತೆ ದೊಡ್ಡ ಮೊತ್ತವನ್ನು ಪಡೆಯಬಹುದು. 9 ಲಕ್ಷ ರೂಪಾಯಿಗಳನ್ನು 15 ವರ್ಷಗಳಲ್ಲಿ ಹಾಗೂ 15 ಲಕ್ಷ ರೂಪಾಯಿಗಳನ್ನು 21 ವರ್ಷಗಳ ನಂತರ ಪಡೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಹೆಣ್ಣು ಮಗುವಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆ ಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಿಂದ ಸುಲಭವಾಗಿ ಹೆಣ್ಣು ಮಕ್ಕಳ ಖರ್ಚನ್ನು ಪೋಷಕರು ಅವಳ ಮದುವೆಗೆ ಹಾಗೂ ವಿದ್ಯಾಭ್ಯಾಸಕ್ಕಾಗಿ ಬಳಸಬಹುದಾಗಿದೆ. ಹಾಗಾಗಿ ದೊಡ್ಡ ಮೊತ್ತದ ಹೂಡಿಕೆಯು ಹೆಣ್ಣು ಮಕ್ಕಳಿಗಾಗಿ ಈ ಯೋಜನೆ ಉಪಯೋಗವಾಗಲಿದೆ ಎಂಬ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ