ನಮಸ್ಕಾರ ಸ್ನೇಹಿತರೆ ಉತ್ತಮವಾದ ಶಿಕ್ಷಣವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂಬ ದೃಷ್ಟಿಯಿಂದ ಹಲವಾರು ರೀತಿಯ ಪ್ರೋತ್ಸಾಹ ಧನವನ್ನು ಬಡ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ನೀಡುತ್ತಾ ಬಂದಿದೆ. ಇದೀಗ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಬಿಡುಗಡೆಯಾಗಿದ್ದು ಈ ಲೇಖನದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಲೇಬರ್ ಕಾರ್ಡ್ ಸ್ಕಾಲರ್ಶಿಪ್ :
ಇನ್ನು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗಾಗಿ ವಿದ್ಯಾರ್ಥಿಗಳು 20000 ರೂಪಾಯಿಗಳವರೆಗೆ ವಿದ್ಯಾರ್ಥಿವೇತನವನ್ನು ಪಡೆಯಬಹುದಾಗಿತ್ತು ಆನ್ಲೈನ ಮುಖಾಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ಲೀಸ್ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಸಲ್ಲಿಸುವುದರ ಮೂಲಕ ಪ್ರೋತ್ಸಾಹ ಧನವನ್ನು ಕರ್ನಾಟಕ ಸರ್ಕಾರದಿಂದ ಪಡೆಯಬಹುದು.
ಪ್ರೋತ್ಸಾಹ ಧನ :
ಕಾರ್ಮಿಕ ಕಲ್ಯಾಣ ಮಂಡಳಿಯು ಲೇಬರ್ ಕಾರ್ಡ್ ಸ್ಕಾಲರ್ಶಿಪ್ನ ಅಡಿಯಲ್ಲಿ 6, 000 ದಿಂದ 20000 ವರೆಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡುತ್ತಿದೆ. 6,000 ಪ್ರೋತ್ಸಾಹ ಧನ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 8000 ವರೆಗೆ ಪ್ರೋತ್ಸಾಹ ಧನ ಪಿಯುಸಿ ಐಟಿಐ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 10,000 ಪ್ರೋತ್ಸಾಹ ಧನ ಯಾವುದೇ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿ ವೇತನ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ 20,000ಗಳವರೆಗೆ ಪ್ರೋತ್ಸಾಹ ಧನ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
ಯಾರೆಲ್ಲ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು :
ಪ್ರೌಢಶಾಲೆ ಪಿಯುಸಿ ಐಟಿಐ ಡಿಪ್ಲೋಮೋ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ ಜೊತೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿತ್ತು ಅದರಲ್ಲಿಯೂ ಮುಖ್ಯವಾಗಿ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಮುಖ್ಯವಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕಾರ್ಮಿಕರ ಕುಟುಂಬದ ಮಾಸಿಕ ವೇತನ 35,000 ಕ್ಕಿಂತ ಹೆಚ್ಚಿರಬಾರದು. ಒಬ್ಬ ವಿದ್ಯಾರ್ಥಿಗೆ ಮಾತ್ರ ಒಂದು ಕುಟುಂಬದಲ್ಲಿ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಶೇಕಡ 50ಕ್ಕಿಂತ ಹೆಚ್ಚಿನ ಅಂಕಗಳನ್ನು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಾಗೂ ಶೇಕಡ 45ರಷ್ಟು ಅಂಕಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಕಳೆದ ವರ್ಷದಲ್ಲಿ ಹೊಂದಿರಬೇಕು.
ಹೀಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಮೂಲಕ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸವನ್ನು ನೀಡುವ ಉದ್ದೇಶದಿಂದ ಈ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಿ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ. ಮಾಹಿತಿಯನ್ನು ನಿಮ್ಮ ಕಾರ್ಮಿಕರ ಮಕ್ಕಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಆನ್ಲೈನ್ನಲ್ಲಿ ಪಾವತಿ ಮಾಡಿದರೆ ಶುಲ್ಕವನ್ನು ಕಟ್ಟಬೇಕು, ತಿಂಗಳಿಗೆ ಎಷ್ಟು ಹಣ .?
- ಹೊಸ ವರ್ಷದಂದು ಯುವಜನತೆಗೆ 3000 ಹಣ ಸಿಗುತ್ತೆ : ತಪ್ಪದೆ ಅರ್ಜಿ ಸಲ್ಲಿಸಿ