News

ವಿದ್ಯಾರ್ಥಿಗಳು 75,000 ವಿದ್ಯಾರ್ಥಿ ವೇತನವನ್ನು ಪಡೆಯಲು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ

HDFC Transition Scholarship

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಚ್ ಡಿ ಎಫ್ ಸಿ ಪರಿವರ್ತನಾ ವಿದ್ಯಾರ್ಥಿ ವೇತನವನ್ನು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದಂತಹ ಪ್ರತಿಭಾನ್ವಿತ ಹಾಗೂ ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಎಚ್ ಡಿ ಎಫ್ ಸಿ ಪರಿವರ್ತನಾ ವಿದ್ಯಾರ್ಥಿ ವೇತನವನ್ನು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಏನೆಲ್ಲಾ ಅಗತ್ಯ ದಾಖಲೆಗಳು ಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

HDFC Transition Scholarship
HDFC Transition Scholarship

ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿ ವೇತನ :

ಆರ್ಥಿಕ ಸಂಕಷ್ಟಗಳಿಂದಾಗಿ ಶೈಕ್ಷಣಿಕ ಕನಸುಗಳನ್ನು ವಿದ್ಯಾರ್ಥಿಗಳು ತ್ಯಜಿಸುವ ಅಗತ್ಯವಿಲ್ಲ ಏಕೆಂದರೆ ವಿದ್ಯಾರ್ಥಿಗಳ ಕನಸನ್ನು ನನಸಾಗಿಸಲು ಹೆಚ್ ಡಿ ಎಫ್ ಸಿ ಬ್ಯಾಂಕ್ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಹೆಚ್ ಡಿ ಎಫ್ ಸಿ ಬ್ಯಾಂಕ್ ನ ಒಂದು ಉಪಕ್ರಮವಾದ ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ನ ಇಸಿಎಸ್ಎಸ್ ಕಾರ್ಯಕ್ರಮವು ಸಮಾಜದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಭರವಸೆಯ ಆಶಾಕಿರಣವಾಗಿದೆ.

ಇದನ್ನು ಓದಿ :ಈ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಉಚಿತ 5 ಲಕ್ಷ ಸೌಲಭ್ಯ ಪಡೆದುಕೊಳ್ಳಬಹುದು

ಯಾರೆಲ್ಲ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು :

ಎಚ್ ಡಿ ಎಫ್ ಸಿ ಬ್ಯಾಂಕ್ ನ ಪರಿವರ್ತನೆ ವಿದ್ಯಾರ್ಥಿ ವೇತನಕ್ಕೆ ಒಂದರಿಂದ 12ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳು, ಐಟಿಐ ಡಿಪ್ಲೋಮೋ ಪಾಲಿಟೆಕ್ನಿಕ್ ಪದವಿ ಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ವಿದ್ಯಾರ್ಥಿ ವೇತನವನ್ನು ಭಾರತೀಯ ಪ್ರಜೆಯೂ ಪಡೆಯಬಹುದಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಹೆಚ್ಚಿರಬಾರದು. ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು 30 ಡಿಸೆಂಬರ್ 2023ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿ ವೇತನದ ಮೊತ್ತ :


35 ಸಾವಿರ ರೂಪಾಯಿಗಳನ್ನ ಸಾಮಾನ್ಯ ಎಂ ಎಸ್ ಸಿ ಎಂ ಎ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ 75,000 ವಿದ್ಯಾರ್ಥಿ ವೇದವನ್ನು ವೃತ್ತಿಪರ ಕೋರ್ಸ್ಗಳಾದ ಎಂ ಟೆಕ್ ಹಾಗೂ ಎಂಬಿಎ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ಒಟ್ಟಾರೆಯಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಸಾಕಷ್ಟು ಕಂಪನಿಗಳು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನಾ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗಾಗಿ ಈ ಮಾಹಿತಿಯ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...