ನಮಸ್ಕಾರ ಸ್ನೇಹಿತರೆ ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಈಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಯಾದ ಯುವನಿಧಿ ಯೋಜನೆ ಜಾರಿಗೆ ಸಾಕಷ್ಟು ಚರ್ಚೆಗಳು ಹರಿದಾಡುತ್ತಿದ್ದು ಈ ಯೋಜನೆ ಜಾರಿಯ ಬಗ್ಗೆ ಇದೀಗ ಡಿಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ :
ಇದೀಗ ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಮಾಡಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಆದ ಡಿಕೆ ಶಿವಕುಮಾರ್ ಅವರು ಸಹ ಮಾಹಿತಿಯನ್ನು ನೀಡಿದ್ದಾರೆ. ಅದರಂತೆ ಯುವನಿಧಿ ಯೋಜನೆಯನ್ನು ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಜಾರಿ ಮಾಡುವ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ಜನತೆಗೆ ತಿಳಿಸಿದ್ದಾರೆ.
ಇದನ್ನು ಓದಿ : ಚಿನ್ನವನ್ನು ಖರೀದಿಸುವವರಿಗೆ ಮಹತ್ವದ ಸುದ್ದಿ ಚಿನ್ನದ ಬೆಲೆ ಇಳಿಕೆ
ಯುವನಿಧಿ ಯೋಜನೆಯ ಆರಂಭ ದಿನಾಂಕ :
ಯುವ ನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 21ರಿಂದ ಆರಂಭವಾಗುತ್ತದೆ. ಈ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ವಿಚಾರವಾಗಿ ರಾಜ್ಯ ಸರ್ಕಾರವು ಚರ್ಚೆಯನ್ನು ಚರ್ಚೆ ಮಾಡುವುದರ ಮೂಲಕ ಕೌಶಲ್ಯ ಅಭಿವೃದ್ಧಿ ಸಚಿವರಿಗೆ ಈ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ನೀಡಲಾಗಿದೆ. ಅಲ್ಲದೆ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮವನ್ನು ಜನವರಿಯಲ್ಲಿ ನಡೆಯಲಿದ್ದು ಡಿಕೆ ಶಿವಕುಮಾರ್ ಅವರು ಅಧಿಕೃತ ದಿನಾಂಕವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ಹೀಗೆ ಬೆಳಗಾವಿ ಅಧಿವೇಶನವನ್ನು ನಡೆಸುವುದರ ಬಗ್ಗೆಯೂ ಡಿಕೆ ಶಿವಕುಮಾರ್ ಅವರು ಹೇಳಿದ್ದು ಈ ಉದ್ಘಾಟನೆಯ ಸಮಾರಂಭವನ್ನು ಜನವರಿಯಲ್ಲಿ ಮಾಡಲಾಗುತ್ತದೆ ಎಂದು ಹೇಳಲಾಗಿದ್ದು, ಒಟ್ಟಾರೆಯಾಗಿ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದ್ದು ಡಿಸೆಂಬರ್ 21ರಿಂದ ಯುವಕ ಯುವತಿಯರು ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ಎಲ್ಲರಿಗೂ ಶೇರ್ ಮಾಡುವುದರ ಮೂಲಕ ಡಿಸೆಂಬರ್ 21 ರಲ್ಲಿ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿ. ಧನ್ಯವಾದಗಳು.
ಇತರೆ ವಿಷಯಗಳು :
- SBI ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಪ್ರತಿಯೊಬ್ಬ ವಿದ್ಯಾರ್ಥಿಗೆ 10,000 ಹಣ
- ಹೆಣ್ಣು ಮಕ್ಕಳಿಗೆ 2.50 ಲಕ್ಷ ಸಿಗಲಿದೆ PUC ಪಾಸಾದವರು ಅಪ್ಲೈ ಮಾಡಿ.!