News

ವಿದ್ಯಾರ್ಥಿಗಳಿಗೆ 35,000 ಪ್ರೋತ್ಸಾಹ ಧನ ಉಚಿತ, ಅರ್ಜಿ ಸಲ್ಲಿಕೆ ಆರಂಭವಾಗಿದೆ

Incentives are free for students application submission has started

ನಮಸ್ಕಾರ ಸ್ನೇಹಿತರೇ, 35,000ಗಳ ಪ್ರೋತ್ಸಾಹ ಧನವನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುತ್ತಿದ್ದು ಈ ಪ್ರೋತ್ಸಾಹ ಧನವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರದ ಈ ಪ್ರೋತ್ಸಾಹ ಧನವನ್ನು ಪಡೆಯಬೇಕಾದರೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬುದರ ಬಗ್ಗೆ ಇದೀಗ ನೀವು ತಿಳಿದುಕೊಳ್ಳಬಹುದು.

Incentives are free for students application submission has started
Incentives are free for students application submission has started

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ :

ಎಸ್ ಎಸ್ ಎಲ್ ಸಿ ಮತ್ತು ಮೆಟ್ರಿಕ್ ನಂತರದ ಪರೀಕ್ಷೆಗಳಲ್ಲಿ ಮೊದಲ ಸ್ಥಾನವನ್ನು ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯು ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಿದೆ. ತಮ್ಮ ಮೊದಲ ಪ್ರಯತ್ನದಲ್ಲಿ ಅರವತ್ತರಿಂದ 74.99 ಪರ್ಸೆಂಟ್ ಅಂಕಗಳನ್ನು ವಿದ್ಯಾರ್ಥಿಗಳು ಗಳಿಸಿದ್ದರೆ ಅವರಿಗೆ ರೂ.7000ಗಳನ್ನು ನೀಡಲಾಗುತ್ತದೆ. ಅದೇ ರೀತಿ ಶೇಕಡ 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದರೆ 15,000 ಗಳು ಆದರೆ ಇದೀಗ 35,000ಗಳನ್ನು ಪ್ರೋತ್ಸಾಹ ಧನವನ್ನು ನೀಡಲು ಮುಂದಾಗಿದೆ.

35,000 ಪ್ರೋತ್ಸಾಹ ಧನ :

ತಮ್ಮ ಪರೀಕ್ಷೆಗಳಲ್ಲಿ ನಿಜವಾಗಿಯೂ ತನ್ನ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ವಿಶೇಷ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು 35,000ಗಳವರೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಎಸ್ ಎಸ್ ಎಲ್ ಸಿ ಪಿ ಯು ಸಿ ಪದವಿ ಐಟಿಐ ಡಿಪ್ಲೋಮೋ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : ಕರ್ನಾಟಕದಲ್ಲಿ 2 ದಿನ ಭಾರಿ ಮಳೆ : ಸತತವಾಗಿ ಸುರಿಯಲಿದೆ ಮಳೆ

ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ವಿಧಾನ :


ಕರ್ನಾಟಕ ಸರ್ಕಾರದ ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಡಿಸೆಂಬರ್ 31 2023ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಈ ಪ್ರೋತ್ಸಾಹ ಧನವನ್ನು ಪಡೆದು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹಾಗೂ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಈ ಪ್ರೋತ್ಸಾಹ ಧನದ ಬಗ್ಗೆ ನಿಮಗೆ ತಿಳಿದಿರುವ ಎಲ್ಲ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...