ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುವ ಪ್ರೈಸ್ ಮನಿ ಸ್ಕಾಲರ್ಶಿಪ್ 2023 ಪ್ರೋತ್ಸಾಹ ಧನದ ಬಗ್ಗೆ ಈ ಲೇಖನದಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಅದರಂತೆ ಸರ್ಕಾರದಿಂದ ನೀಡುವ ಈ ಪ್ರೈಸ್ ಮನಿಗೆ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆ ಅರ್ಜಿ ಸಲ್ಲಿಸುವುದರ ಮೂಲಕ ಪ್ರೋತ್ಸಾಹ ಧನವನ್ನು ಸರ್ಕಾರದಿಂದ ಪಡೆದು ಉನ್ನತ ಶಿಕ್ಷಣವನ್ನು ಪ್ರಾರಂಭಿಸಬಹುದು.
ಪ್ರೈಸ್ ಮನಿ :
ಸಮಾಜ ಕಲ್ಯಾಣ ಇಲಾಖೆಯಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಲು ಪಿಯುಸಿ ಡಿಗ್ರಿ ಡಿಪ್ಲೋಮೋ ಪಿಜಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅದರಲ್ಲಿಯೂ ಈ ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದ್ದು ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೈಸ್ ಮಣಿಯನ್ನು ಪಡೆದುಕೊಳ್ಳಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾಗಿದ್ದರೆ ಅವರಿಗೆ ರಾಜ್ಯ ಸರ್ಕಾರವು ಈ ಪ್ರೋತ್ಸಾಹ ಧನವನ್ನು ನೀಡುತ್ತದೆ.
ಈ ಪ್ರೋತ್ಸಾಹ ಧನವನ್ನು 2023ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಮೂರು ವರ್ಷದ ಡಿಪ್ಲೋಮೋ ಪದವಿ ಯಾವುದೇ ಸ್ನಾತಕೋತ್ತರ ಪದವಿಯನ್ನು ಪಾಸಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನದ ಮೊತ್ತವನ್ನು ಕೋರ್ಸ್ ಗಳಿಗೆ ಅನುಗುಣವಾಗಿ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ನೀಡುತ್ತದೆ.
ಪ್ರೋತ್ಸಾಹ ಧನದ ಮೊತ್ತ :
20,000ಗಳನ್ನು ದ್ವಿತೀಯ ಪಿಯುಸಿ 3 ವರ್ಷದ ಡಿಪ್ಲೋಮೋ ಪದವಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 25000ಗಳನ್ನು ಪದವಿ ಪಡೆದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 30000ಗಳನ್ನು ಯಾವುದೇ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ. 35,000ಗಳನ್ನು ಅಗ್ರಿಕಲ್ಚರ್ ಇಂಜಿನಿಯರಿಂಗ್ ವೆಟರ್ನರಿ ಮೆಡಿಸನ್ ಹೀಗೆ ಈ ರೀತಿಯ ಪದವಿಗಳಿಗೆ ಪ್ರೋತ್ಸಾಹ ಧನವನ್ನು ಕರ್ನಾಟಕ ಸರ್ಕಾರ ನೀಡುತ್ತದೆ.
ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರವು ನಿಗದಿಪಡಿಸಿದ್ದು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ವಿದ್ಯಾರ್ಥಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಆಗಿರಬೇಕು. ಪ್ರಥಮ ಬಾರಿಗೆ ಉತ್ತೀರ್ಣರಾಗಿರಬೇಕು ಹಾಗೂ ಪ್ರಥಮ ದರ್ಜೆಯಲ್ಲಿ ವಿದ್ಯಾರ್ಥಿಯ ಉತ್ತೀರ್ಣರಾಗಿರಬೇಕು.
ಅಗತ್ಯವಿರುವ ದಾಖಲೆಗಳು :
ಕರ್ನಾಟಕ ಸರ್ಕಾರದಿಂದ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ ಸಂಖ್ಯೆ ಪಾಸ್ಪೋರ್ಟ್ ಸೈಜ್ ಫೋಟೋ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಅದೇ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ ಮೊಬೈಲ್ ನಂಬರ್ ಪದವಿ ಮಾರ್ಕ್ಸ್ ಕಾರ್ಡ್ ಗಳು ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು.
ಇದನ್ನು ಓದಿ :ಎಲ್ಲ ಗ್ಯಾರೆಂಟಿ ಯೋಜನೆಗಳು ರದ್ದು : ರಾಜ್ಯದ ಎಲ್ಲ ಜನರಿಗೂ ಶಾಕ್
ಅರ್ಜಿ ಸಲ್ಲಿಸುವ ವಿಧಾನ :
ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸಂಬಂಧಪಟ್ಟ ಇಲಾಖೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಅವರಿಗೆ ಉನ್ನತ ಶಿಕ್ಷಣವನ್ನು ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾಗಿದ್ದರೆ ಅವರು ಪ್ರಥಮ ದರ್ಜೆಯಲ್ಲಿ ಪ್ರಥಮ ಬಾರಿಗೆ ಪಾಸಾಗಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕರ್ನಾಟಕ ಸರ್ಕಾರದಿಂದ ಪ್ರೋತ್ಸಾಹ ಧನ ಲಭ್ಯವಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
25,000 ರೂ ಎಲ್ಲಾ ರೈತರ ಖಾತೆಗೆ : ಈ ಕೂಡಲೇ ರೈತರು ಪಟ್ಟಿಯನ್ನು ಪರಿಶೀಲಿಸಿ
ಕೃಷಿ ಇಲಾಖೆಯಿಂದ ನೇಮಕಾತಿ : ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಬ್ಬರಿಗೂ