ನಮಸ್ಕಾರ ಸ್ನೇಹಿತರೆ ಈಗಾಗಲೇ ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ಈಡೇರಿಸಲು ಕರ್ನಾಟಕ ಸರ್ಕಾರವು ನಿರ್ಧರಿಸಿದೆ ಅಲ್ಲದೆ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೂಡ ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕೈಗೊಂಡಿದೆ. ಪ್ರಸ್ತುತ ಹೆಚ್ಚುರಿಯಾಗಿ ಐದು ಸಾವಿರ ರೂಪಾಯಿಗಳನ್ನು ವೇತನಕ್ಕೆ ಸೇರಿಸಲು ಸರ್ಕಾರವು ನಿರ್ಧಾರ ಮಾಡಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇದೀಗ ನೀವು ತಿಳಿದುಕೊಳ್ಳಬಹುದು.
ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದನೆ :
ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರೊಂದಿಗೆ ಅತಿಥಿ ಉಪನ್ಯಾಸಕರ ಬೇಡಿಕೆ ಮತ್ತು ಸಮಸ್ಯೆಗಳ ಕುರಿತಂತೆ ನಡೆದ ಚರ್ಚೆಯ ನಂತರ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ಅವರು ಸರ್ಕಾರದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ತಿಂಗಳಿಗೆ ಒಂದು ದಿನ ಅತಿಥಿ ಉಪನ್ಯಾಸಕರಿಗೆ ರಜೆ ನೀಡುವ ಕುರಿತು ಪರಿಶೀಲಿಸಿದ್ದಾಗಿದ್ದು ಪ್ರಜೆಯ ಒಂದು ದಿನದ ಕಾರ್ಯಭಾರವನ್ನು ಇತರ ದಿನಗಳಲ್ಲಿ ಸರಿಯಾಗಿ ದೂಗಿಸುವಂತೆ ಶರತ್ತಿಗೆ ಒಳಪಡಿಸಿ ಅತಿಥಿ ಉಪನ್ಯಾಸಕರು 15/19 ಗಂಟೆಗಳ ಕಾರ್ಯಭಾರ ನಿರ್ವಹಿಸುವಂತೆ ತೀರ್ಮಾನಿಸಲಾಗಿದೆ.
ರಾಜ್ಯ ಸರ್ಕಾರದಿಂದ ಕೆಲವೊಂದು ನಿಯಮಗಳು :
ರಾಜ್ಯ ಸರ್ಕಾರವು ಅಧಿದೇವ್ ಉಪನ್ಯಾಸಕರ ಹಿಂದಿನ ಸೇವೆಯನ್ನು ಆಧರಿಸಿ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿದ್ದು ಅವರಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕುರುಪಾಂಕವನ್ನು ನೀಡುವುದರ ಬಗ್ಗೆಯೂ ಕೂಡ ಪರಿಶೀಲನೆ ನಡೆಸಲಾಗಿದೆ.
ಅತಿಥಿ ಉಪನ್ಯಾಸಗಳನ್ನು ಸೇವಾ ಸಕ್ರ ಮಾತಿಗೊಳಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯವು ಉಮಾದೇವಿ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಹಾಗೂ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನೀಡಿರುವ ತೀರ್ಪುಗಳ ಆಧಾರದ ಮೇಲೆ ಅವಕಾಶ ಇಲ್ಲದೆ ಇರುವುದರಿಂದ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಇಂಜಿನಿಯರಿಂಗ್ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಮುಂದಿನ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಕನಿಷ್ಠ ಐದು ವರ್ಷಗಳಿಗಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಶೇಕಡ ಒಂದರಂತೆ ಕಷ್ಟ ಪ್ರತಿ ವರ್ಷ ನೀಡುವ ಅವಕಾಶವನ್ನು ವಿಶೇಷ ನಿಯಮಗಳಲ್ಲಿ ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಧನ ವಸತಿ ಉಪನ್ಯಾಸಕರಿಗೆ :
ಪ್ರಸ್ತುತ ಅತಿಥಿ ಉಪನ್ಯಾಸಕರಿಗೆ ಚಾಲ್ತಿಯಲ್ಲಿರುವ ಗೌರವ ಧನಕ್ಕೆ ಹೆಚ್ಚುವರಿಯಾಗಿ 5000ಗಳನ್ನು ಪಾವತಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಸರ್ಕಾರಕ್ಕೆ ವಾರ್ಷಿಕ ಅಂದಾಜು ಸದರಿ ಹೆಚ್ಚುವರಿ ಮೊತ್ತವನ್ನು ಒದಗಿಸಲು 84.0 ಕೋಟಿಗಳ ಅನುದಾನ ಅವಶ್ಯಕವಿರುತ್ತದೆ. ಹೀಗೆ ಸರ್ಕಾರದ ತೀರ್ಮಾನವನ್ನು ಒಪ್ಪಿ ಎಲ್ಲಾ ಅತಿಥಿ ಉಪನ್ಯಾಸಕರು ದಿನಾಂಕ 01.01.2024 ರಂದು ತರಗತಿಗಳಿಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ಹೀಗೆ ಕರ್ನಾಟಕ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆಯು ಹೆಚ್ಚಾಗಿರುವ ಕಾರಣ ಅವರ ಬೇಡಿಕೆಯನ್ನು ರಾಜ್ಯ ಸರ್ಕಾರ ಪರಿಗಣನೆಗೆ ತೆಗೆದುಕೊಂಡು ಸುಮಾರು 5000 ಹೆಚ್ಚುವರಿ ಗೌರವ ಧನವನ್ನು ನೀಡಲು ನಿರ್ಧರಿಸಿದೆ. ಹಾಗಾಗಿ ರಾಜ್ಯ ಸರ್ಕಾರದಿಂದ ಗೌರವ ಧನ ಇನ್ನು ಮುಂದೆ ಅತಿಥಿ ಉಪನ್ಯಾಸಕರಿಗೆ ಸಿಗಲಿದೆ ಎಂಬ ಮಾಹಿತಿಯನ್ನು ನಿಮಗೆ ತಿಳಿದಿರುವ ಅತಿಥಿ ಉಪನ್ಯಾಸಕರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು