ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮತ್ತೊಂದು ವಿದ್ಯಾರ್ಥಿ ವೇತನದ ಬಗ್ಗೆ ತಿಳಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಹಾಗಾದರೆ ಈ ವಿದ್ಯಾರ್ಥಿ ವೇತನ ಯಾವುದು? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಏನೆಲ್ಲಾ ಅರ್ಹತೆಗಳು ಇರಬೇಕು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಶ್ರೀ ಜೆ ಪಿ ನಾರಾಯಣಸ್ವಾಮಿ ಪ್ರತಿಷ್ಠಾನ ವಿದ್ಯಾರ್ಥಿ ವೇತನ :
2023-2024 ಸಾಲಿನ ವಿದ್ಯಾರ್ಥಿ ವೇತನಕ್ಕೆ ಶ್ರೀ ಜೆಪಿ ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಇದೀಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೇವಲ ಮೂರು ದಿನಗಳು ಮಾತ್ರ ಬಾಕಿ ಇದ್ದು ಅರ್ಹ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಆದಷ್ಟು ಬೇಗ ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು ಕೊನೆಯ ದಿನಾಂಕ 15 ಡಿಸೆಂಬರ್ 2023 ಆಗಿರುತ್ತದೆ.
ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :
ಜೆಪಿಎನ್ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ವಿದ್ಯಾರ್ಥಿಗಳು ಪದವಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಹಿಂದಿನ ವರ್ಷದಲ್ಲಿ ವ್ಯಾಸಂಗ ಮಾಡಿರುವುದರಲ್ಲಿ ಶೇಕಡ ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
ಅಂದರೆ ಶೇಕಡ 75 ಕ್ಕಿಂತ ಹೆಚ್ಚಿನ ಅಂಕಗಳನ್ನು ಉತ್ತರ ಕನ್ನಡ ಶಿವಮೊಗ್ಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಹೊಂದಿರಬೇಕು. ಕರ್ನಾಟಕ ರಾಜ್ಯದ ಪ್ರವಾಸಿಗಳೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಹಾಗೆ ಬಿಪಿಎಲ್ ಕಾರ್ಡ್ ಅನ್ನು ಕುಟುಂಬವು ಹೊಂದಿರಬೇಕು. ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರು ಮಾತ್ರ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ
ಇದನ್ನು ಓದಿ : ಯುವನಿಧಿ ಯೋಜನೆಯ ಜಾರಿ ಯಾವ ದಾಖಲೆ ಬೇಕು ತಿಳಿದುಕೊಳ್ಳಿ ತಿಂಗಳಿಗೆ -3000
ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :
ಜೆಪಿಏನ್ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ವಿಳಾಸದ ಪುರಾವೆ, ವಿದ್ಯಾ ಸಂಸ್ಥೆಯ ನೀಡುವ ಐಡಿ ಕಾರ್ಡ್ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರಬೇಕು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ೆಪಿಎನ್‌ಪಿ ಸ್ಕಾಲರ್ಶಿಪ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಆ ವೆಬ್ಸೈಟ್ ಎಂದರೆ https://jpnp.org.in/en/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.
ಹೀಗೆ ಶ್ರೀ ಜೆಪಿ ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ಬಗ್ಗೆ ಮೇಲೆ ತಿಳಿಸಿರುವ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಈ ಸಂಸ್ಥೆಯ ಅಡಿಯಲ್ಲಿ ಪಡೆಯಬಹುದು ಎಂಬ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಹೊಸ ವರ್ಷಕ್ಕೆ ಉದ್ಯೋಗಿಗಳಿಗೆ 7ನೇ ವೇತನ ಆಯೋಗ ಜಾರಿಗೆ ಬರಲಿದೆ ತಿಳಿದುಕೊಳ್ಳಿ
- ಹೊಸ ವರ್ಷದಿಂದ ಈ ಮೂರು ರಾಶಿಯವರ ಹಣ ಕಾಸು ಜೀವನ ವೃದ್ಧಿಯಾಗಲಿದೆ