News

ಸಂಪೂರ್ಣವಾಗಿ ರೈತರ ಸಾಲವನ್ನು ಮನ್ನಾ ಮಾಡಲಿ : ಸರ್ಕಾರದ ತೀರ್ಮಾನ ಇಲ್ಲಿದೆ ನೋಡಿ

Let farmers' loans be completely waived off

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕರ್ನಾಟಕ ಸರ್ಕಾರಕ್ಕೆ ಆ ಗ್ರಹ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರೈತರ ಸಾಲವನ್ನು ರಾಜ್ಯದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಮನ್ನ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷರಾದ ವಾಸುದೇವ ಮೇಟಿ ಆಗ್ರಹಿಸಿದ್ದಾರೆ.

Let farmers' loans be completely waived off
Let farmers’ loans be completely waived off

ರಾಜ್ಯ ಸರ್ಕಾರಕ್ಕೆ ಆಗ್ರಹ :

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷರಾದ ವಾಸುದೇವ ಮೇಟಿ ಅವರು ರಾಜ್ಯದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ರೈತರ ಸಾಲವನ್ನು ಸಂಪೂರ್ಣವಾಗಿ ಮರಣ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರೈತರ ದಿನಾಚರಣೆ 2023 ರಾ ಅಂಗವಾಗಿ ಬುಧವಾರ ನಗರದ ಒಳಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯನಗರ ಜಿಲ್ಲಾ ರೈತರ ಸಮಾವೇಶದಲ್ಲಿ ಈ ಮಾಹಿತಿಯನ್ನು ವಾಸುದೇವ ಮೇಟಿ ಅವರು ಮಾತನಾಡಿದರು. ಹತ್ತು ಸಾವಿರ ಕೋಟಿ ರೂಪಾಯಿ ಬಜೆಟ್ ನಲ್ಲಿ ಖುಷಿಗೆ ಹಾಗೂ 15,000 ಕೋಟಿ ರೂಪಾಯಿ ನೀರಾವರಿಗೆ ಮೀಸಲಿಡಬೇಕು. ಅಲ್ಲದೆ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು ಕೂಡ ಹೆಚ್ಚಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ : ಕೆಸಿಸಿ ರೈತರ 1ಲಕ್ಷ ಸಾಲ ಮನ್ನಾ ಪಟ್ಟಿ ಬಿಡುಗಡೆ : ತಮ್ಮ ಹೆಸರನ್ನು ರೈತರು ಚೆಕ್ ಮಾಡಿ ಕೊಳ್ಳಿ

ಕೆಲವೊಂದು ಬೇಡಿಕೆಗಳು :

ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ರವರನ್ನು ರೈತರ ಭಾವನಿಗೆ ಧಕ್ಕೆ ಬರುವಂತೆ ಮಾತನಾಡಿದ್ದು ತಕ್ಷಣ ಸಚಿವ ಸಂಪುಟದಿಂದ ಅವರನ್ನು ಕೈಬಿಡಬೇಕೆಂದು ಆಗ್ರಹಿಸಿದರು. ನೀರಾವರಿ ಸಚಿವರು ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಒಂದು ಸಭೆಯನ್ನು ಏಳು ತಿಂಗಳಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಕರೆಯದೆ ಇರುವುದಕ್ಕೆ ತೀವ್ರ ಆಕ್ಷೇಪವನ್ನು ಸಹ ವ್ಯಕ್ತಪಡಿಸಿದರು. ಮೂರು ಖುಷಿ ಕಾಯ್ದೆಗಳನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ಕೊಟ್ಟೂರು ಬಸವಲಿಂಗ ಮಹಾಸ್ವಾಮಿಜಿಯವರು ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದು ಅವರು ಕೂಡ ಈ ಬಗ್ಗೆ ಮಾತನಾಡಿದ್ದು ಈ ದೇಶದ ಬೆನ್ನೆಲುಬು ರೈತರೆಯಾಗಿದ್ದು ವೈಜ್ಞಾನಿಕವಾಗಿ ರೈತರು ಬೆಳೆ ಬೆಳೆಯುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡುವ ಕೆಲಸವು ಅವರಿಗೆ ಆಗಬೇಕೆಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದವರು :


ಬುಧವಾರ ಹಮ್ಮಿಕೊಳ್ಳಲಾಗಿದ್ದ ಈ ಸಭೆಯಲ್ಲಿ ರೈತರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಉಪತೇಶ್ವರ ಮಠದ ನಿರಂಜನ ಪ್ರಭುದೇಶಿಕ ಮಹಾಸ್ವಾಮಿ ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಗಾಳೆಪ್ಪ ಹೀಗೆ ಕಣ್ಣೆತ್ತಿಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹೀಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿರುವುದರ ಬಗ್ಗೆ ಈ ಮಾಹಿತಿ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...