ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ವಿದ್ಯಾರ್ಥಿಗಳಿಗೆ ಎಲ್ಐಸಿ ಕಂಪನಿಯು ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ಈಗಾಗಲೇ ಸ್ಎಸ್‌ಪಿ ಸ್ಕಾಲರ್ಶಿಪ್ ಅನ್ನು 2024ರಲ್ಲಿ ಅರ್ಜಿ ಆಹ್ವಾನಿಸಿದ್ದು ಇದೀಗ ಎಲ್ಐಸಿಯ ಗೋಲ್ಡನ್ ಜುಬ್ಬಲಿ ಸ್ಕಾಲರ್ಶಿಪ್ ಕೂಡ ಪ್ರಾರಂಭವಾಗಿದೆ ಎಂದು ಹೇಳಬಹುದು.

ಎಲ್ಐಸಿ ಸ್ಕಾಲರ್ಶಿಪ್ ಯೋಜನೆ :
ಎಲ್ಲಾ 12ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಲೈಫ್ ಇನ್ಸೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಎಲ್ಐಸಿ ಜಾರಿಗೊಳಿಸಿರುವ ಎಲ್ಐಸಿ ಗೋಲ್ಡನ್ ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅರ್ಹ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ.
ಸ್ಕಾಲರ್ಶಿಪ್ ನ ಅರ್ಹತೆಗಳು :
ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ಕನಿಷ್ಠ ಅರವತ್ತು ಪರ್ಸೆಂಟ್ ಅಂಕಗಳೊಂದಿಗೆ 2022 23ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಎರಡುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು. ವೈದ್ಯಕೀಯ ಇಂಜಿನಿಯರಿಂಗ್ ಯಾವುದೇ ಪದವಿಪೂರ್ವ ವಿಭಾಗದಲ್ಲಿ ಇಂಟಿಗ್ರೇಟೆಡ್ ಕೋರ್ಸ್ಗಳು ಅಥವಾ ಯಾವುದೇ ಡಿಪ್ಲೋಮೋ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಇಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಎಲ್ಐಸಿ ಯಾ ಸ್ಕಾಲರ್ಶಿಪ್ ಮೊತ್ತ :
ಎಲ್ಐಸಿ ಕಂಪನಿಯು ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ಮೊತ್ತ 40,000 ಗಳಾಗಿದ್ದು ಅರ್ಹ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :
ಕಂಪನಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ 10 ಮತ್ತು 12ನೇ ತರಗತಿಯ ಅಂಕಪಟ್ಟಿ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ ಲಿಂಕ್ :
ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಇರುವ ಅಧಿಕೃತ ವೆಬ್ಸೈಟ್ https://www.buddy4study.com/scholarship/lic-golden-jubilee-scholarship ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ಎಲ್ಐಸಿ ಕಂಪನಿಯು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸವನ್ನು ನೀಡುವ ಉದ್ದೇಶದಿಂದ ಈ ಸ್ಕಾಲರ್ಶಿಪ್ ನೀಡುತ್ತಿದ್ದು ನಿಮಗೆ ತಿಳಿದಿರುವ ಅರ್ಹ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಎಲ್ ಐ ಸಿ ಕಂಪನಿಯಿಂದ 40,000ಗಳವರೆಗೆ ವಿದ್ಯಾರ್ಥಿ ವೇತನ ಪಡೆಯಿರಿ ಎಂದು ತಿಳಿಸಿ ಧನ್ಯವಾದಗಳು.