News

ರೇಷನ್ ಕಾರ್ಡ್ ಇರುವವರಿಗೂ ಹಾಗು ಪಡೆಯುವರಿಗೂ ಹೊಸ ಸೂಚನೆ

New Notice for Ration Card Holders and Recipients

ನಮಸ್ಕಾರ ಸ್ನೇಹಿತರೆ ಮತ್ತೆ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ರಾಜ್ಯಾದ್ಯಂತ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ. ರಾಜ್ಯ ಸರ್ಕಾರವು ಜಾರಿಗೆ ತರುವ ಎಲ್ಲಾ ಯೋಜನೆಗಳಿಗೂ ಅಗತ್ಯವಾಗಿ ರೇಷನ್ ಕಾರ್ಡ್ ಬೇಕಾಗಿರುವ ದಾಖಲೆ ಎಂದು ಎಲ್ಲರಿಗೂ ತಿಳಿದಿರುವುದೇ. ಆದರೆ ಸಾಕಷ್ಟು ಜನರಿಗೆ ಈ ಯೋಜನೆಯ ಪ್ರಯೋಜನ ಸಿಗದೇ ಇರುವುದಕ್ಕೂ ಕೂಡ ರೇಷನ್ ಕಾರ್ಡ್ ವಾಗಿದ್ದು ಇದೀಗ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಆಹ್ವಾನ ಮಾಡಲು ಅವಕಾಶವನ್ನು ಕಲ್ಪಿಸಿದೆ.

New Notice for Ration Card Holders and Recipients
New Notice for Ration Card Holders and Recipients

ಮೂರು ಬಾರಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ :

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಅಥವಾ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಅತಿಮುಖ್ಯವಾಗಿದ್ದು ಇನ್ನೂ ಲಕ್ಷಾಂತರ ಜನರಿಗೆ ರಾಜ್ಯದಲ್ಲಿ ರೇಷನ್ ಕಾರ್ಡ್ ಲಭ್ಯವಾಗದೆ ಇರುವ ಕಾರಣ ಈ ಯೋಜನೆಗಳ ಪ್ರಯೋಜನಗಳು ಅವರಿಗೆ ಸಿಗುತ್ತಿಲ್ಲ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಈಗಾಗಲೇ ತಿಳಿಸಿರುವಂತೆ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಅಗತ್ಯವಾದ ದಾಖಲೆಯಾಗಿದೆ ಎಂದು ಹೇಳಿದ್ದು ಕೆಲವು ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವುದು ಕೂಡ ಅನಿವಾರ್ಯವಾಗಿರುತ್ತದೆ. ಈಗಾಗಲೇ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಮೂರು ಬಾರಿ ಅವಕಾಶ ಕಲ್ಪಿಸಿದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ತಾಂತ್ರಿಕ ದೋಷಗಳಿಂದ ಸಾಧ್ಯವಾಗಿಲ್ಲ ಹಾಗಾಗಿ ಮತ್ತೊಮ್ಮೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಬೇಕೆಂದು ಜನರು ಸರ್ಕಾರದ ಮೊರೆ ಹೋಗಿದ್ದಾರೆ.

ಇದೇ ಕೊನೆಯ ಅವಕಾಶ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು :

ಮತ್ತೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ರಾಜ್ಯದ್ಯಂತ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರವು ಅವಕಾಶ ಮಾಡಿಕೊಟ್ಟಿದೆ. ಡಿಸೆಂಬರ್ ಮೂರನೇ ತಾರೀಕಿಗೆ ಅಂದರೆ ಇಂದು ರಾಜ್ಯಾದ್ಯಂತ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರವು ರಾಜ್ಯ ಸಲ್ಲಿಸುವ ಅವಕಾಶ ಕಲ್ಪಿಸಿದ್ದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ : ಖಾತೆಯಲ್ಲಿರುವ ಗೃಹಲಕ್ಷ್ಮಿಯ ಹಣ ಮಾಯ : ಕೂಡಲೇ ಈ ರೀತಿ ಮಾಡಿ


ಎಲ್ಲಿ ಅರ್ಜಿ ಸಲ್ಲಿಸಬೇಕು :

ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಮ್ಮ ಹತ್ತಿರದ ಬೆಂಗಳೂರು ಒನ್ ಗ್ರಾಮವನ್ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಮತ್ತೆ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಅವಕಾಶಕ್ಕಾಗಿ ಕಾಯುತ್ತಿರುವ ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಮಧ್ಯಾಹ್ನ 2:00 ಒಳಗಾಗಿ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಬರ ಪರಿಹಾರ ಹಣ ಇನ್ನು ವಿಳಂಬವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೋದಿಗೆ ಪ್ರಶ್ನೆ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ : ಈ ಕೂಡಲೇ ಅರ್ಜಿ ಸಲ್ಲಿಸಿ

Treading

Load More...