News

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಮೊದಲು ಸಲ್ಲಿಸಿದ್ದರೆ ಅವರಿಗಾಗಿ ಈ ಹೊಸ ಸೂಚನೆ

New Notification for Gruhalkshmi Yojana

ನಮಸ್ಕಾರ ಸ್ನೇಹಿತರೇ ಮಹಿಳೆಯರ ಖಾತೆಗೆ ಸರ್ಕಾರವು ಶತಾಯಗತಾಯ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲು ಪ್ರಯತ್ನಿಸುತ್ತಿದೆ. ಪ್ರತಿಶತ ನೂರರಷ್ಟು ಗೃಹಲಕ್ಷ್ಮಿ ಯೋಜನೆಯ ಯಶಸ್ವಿಯಾಗಿ ಚಾಲ್ತಿಯಲ್ಲಿದ್ದು ಎಲ್ಲಾ ಮಹಿಳೆಯರಿಗು ಗೃಹಲಕ್ಷ್ಮಿ ಯೋಜನೆಯ ಹಣವನ್ನು ತಲುಪಿಸುತ್ತೇವೆ ಎಂದು ರಾಜ್ಯ ಸರ್ಕಾರವು ಹೇಳಿಕೊಳ್ಳುತ್ತಾ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸಾಕಷ್ಟು ಶ್ರಮವಹಿಸುತ್ತಿದೆ.

New Notification for Gruhalkshmi Yojana
New Notification for Gruhalkshmi Yojana

ಗೃಹಲಕ್ಷ್ಮಿ ಯೋಜನೆಯ ಹಣ ಬರಲು ಹೊಸ ಕ್ರಮಗಳು :

10 ರಿಂದ 20 ರಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಬಂದಿರುವುದಿಲ್ಲ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆಯನ್ನು ನಡೆಸಿದ್ದು ಹಲವರು ಪರಿಣಾಮಕಾರಿ ನಿರ್ಣಯಗಳನ್ನು ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಂಡಿದ್ದಾರೆ.

ಹಣ ಬರದೆ ಇದ್ದರೆ ತಕ್ಷಣ ದೂರ ನೀಡುವುದು :

ಈಗಾಗಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುವ ಪ್ರಕ್ರಿಯೆಯು ಆರಂಭವಾಗಿದ್ದು , ಮೂರನೇ ಕಂತಿನ ಹಣವನ್ನು ಸಹ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಆದರೂ ಸಹ ಕೆಲವರು ಬ್ಯಾಂಕ್ ಖಾತೆಗೆ ಹಣ ಬಂದಿರುವುದಿಲ್ಲ ಎಂದು ನಿಮಗೆ ತಿಳಿದು ಬಂದರೆ ಸರ್ಕಾರವು ಸೂಚಿಸಿದಂತಹ ಪರಿಹಾರವುಗಳನ್ನು ಟ್ರೈ ಮಾಡುವುದು ಸೂಕ್ತ.

ಸರ್ಕಾರವು ದೂರು ಸಲ್ಲಿಸುವ ಸಲುವಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇದ್ದರೆ ಗೃಹಲಕ್ಷ್ಮಿ ಆರಂಭಿಸಿದ್ದು ಇದರ ಮೂಲಕ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ನಿಮ್ಮ ಖಾತೆಗೆ ಹಣ ಬಂದಿಲ್ಲ ಎಂದು ದೂರು ನೀಡಬಹುದಾಗಿದೆ. ತಕ್ಷಣವೇ ನಿಮ್ಮ ಖಾತೆಯನ್ನು ಪರಿಶೀಲಿಸುವುದರ ಮೂಲಕ ಪರಿಹಾರವನ್ನು ಸೂಚಿಸಿ ಯಾವ ಮಹಿಳೆಯರ ಬ್ಯಾಂಕ್ ಖಾತೆಗೆ ಗ್ರಾಮದಲ್ಲಿ ಹಣ ವರ್ಗಾವಣೆಯಾಗಿಲ್ಲ ಹಾಗೆ ಏಕೆ ವರ್ಗಾವಣೆಯಾಗಿಲ್ಲ ಎಂಬುದರ ಹಲವು ಮಾಹಿತಿಗಳನ್ನು ಕೂಡ ಅವರು ಸರ್ಕಾರಕ್ಕೆ ಒದಗಿಸಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬರುವಂತೆ ಅಂಗನವಾಡಿ ಸಹಾಯಕರಿಗೂ ಸಹ ರಾಜ್ಯ ಸರ್ಕಾರವು ಸೂಚನೆ ನೀಡಿದೆ.

ಇದನ್ನು ಓದಿ : ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದವರಿಗೆ ನೇರ ಉದ್ಯೋಗ


ಡಿಸೆಂಬರ್ ಅಂತ್ಯದ ಒಳಗೆ ಎಲ್ಲಾ ಮಹಿಳೆಯರಿಗೂ ಹಣ ಜಮಾ :

ರಾಜ್ಯ ಸರ್ಕಾರ ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಎಲ್ಲಾ ಮಹಿಳೆಯರಿಗೂ ಡಿಸೆಂಬರ್ ಅಂತ್ಯದ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲಾಗುತ್ತದೆ ಎಂಬ ಭರವಸೆಯನ್ನು ನೀಡಿದೆ. ಅದರಂತೆ ಆಗಸ್ಟ್ 15ನೇ ತಾರೀಖಿನ ಮೊದಲು ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಿದರು ಅವರಿಗೆ ಡಿಸೆಂಬರ್ ಒಳಗೆ 6,000ಗಳನ್ನು ಮಿಸ್ಸಾಗದಂತೆ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ರವರು ಗೃಹಲಕ್ಷ್ಮಿಯರಿಗೆ ಭರವಸೆ ನೀಡಿದ್ದಾರೆ.

ಒಟ್ಟಾರಿಯಾಗಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ಬಂದಿದ್ದು ಕೆಲವೊಂದು ತಾಂತ್ರಿಕ ದೋಷಗಳು ಉಂಟಾದ ಕಾರಣ ಕೆಲವು ಮಹಿಳೆಯರ ಬ್ಯಾಂಕ್ ಖಾತೆಗೆ ಮಾತ್ರ ಹಣ ತಲುಪುತ್ತಿಲ್ಲ ಮುಂದಿನ ಡಿಸೆಂಬರ್ ಒಳಗಾಗಿ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ತಲುಪಲಿದೆ ಎಂಬ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದ್ದು ಅದರಂತೆ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತದೆಯೋ ಇಲ್ಲವೋ ಎಂದು ಕಾದು ನೋಡಬೇಕಾಗಿದೆ. ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರಿಗೆ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

Treading

Load More...