News

40,000 ಸ್ಕಾಲರ್ಶಿಪ್ LIC ನೀಡುತ್ತಿದೆ : ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

Scholarship for students from LIC

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಿಕೊಡುವ ವಿಷಯ ಏನೆಂದರೆ ವಿದ್ಯಾರ್ಥಿಗಳಿಗೆ ಎಲ್ಐಸಿ ಕಂಪನಿ ವಿದ್ಯಾರ್ಥಿ ವೇತನವನ್ನು ನೀಡುತ್ತಿರುವುದರ ಬಗ್ಗೆ. ಈಗಾಗಲೇ 2024ರಲ್ಲಿ ವಿದ್ಯಾರ್ಥಿಗಳಿಗೆ ಎಸ್ ಎಸ್ ಟಿ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭವಾಗಿದ್ದು ಇದರ ಜೊತೆಗೆ ಎಲ್ಐಸಿ ಗೋಲ್ಡನ್ ಜುಬ್ಲಿ ಸ್ಕಾಲರ್ಶಿಪ್ ಕೂಡ ಪ್ರಾರಂಭವಾಗಿದೆ ಎಂಬುದರ ಬಗ್ಗೆ ಈಗಾಗಲೇ ಪ್ರತಿಯೊಬ್ಬರಿಗೂ ತಿಳಿದಿದೆ.

Scholarship for students from LIC
Scholarship for students from LIC

ಎಲ್ಐಸಿ ಇಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ :

ಈಗಾಗಲೇ ಎಲ್ಐಸಿ ಗೋಲ್ಡನ್ ಸ್ಕಾಲರ್ಶಿಪ್ ಅನ್ನು ಎಲ್ಐಸಿ ಜಾರಿಗೊಳಿಸಿದ್ದು ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನವರಿ 14ರವರೆಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ವಿದೆ. 40,000 ವಿದ್ಯಾರ್ಥಿ ವೇತನವನ್ನು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೂರು ಕಂತುಗಳಲ್ಲಿ ಎಲ್ಐಸಿ ಗೋಲ್ಡನ್ ಸ್ಕಾಲರ್ಶಿಪ್ ಯೋಜನೆಯಡಿಯಲ್ಲಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಕೆಲವು ಅರ್ಹತೆಗಳು :

ಎಲ್ಐಸಿ ಗೋಲ್ಡನ್ ಜುಬ್ಲಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಕನಿಷ್ಠ ಶೇಕಡ 60ರಷ್ಟು ಅಂಕಗಳೊಂದಿಗೆ 2022 23ನೇ ಸಾಲಿನಲ್ಲಿ ಉತ್ತೀರ್ಣರಾಗಿರಬೇಕು. ಪೋಷಕರ ಕುಟುಂಬದ ವಾರ್ಷಿಕ ಆದಾಯವು 2,50,000 ಕ್ಕಿಂತ ಕಡಿಮೆ ಇರಬೇಕು. ಯಾವುದೇ ಪದವಿಪೂರ್ವ ವಿಭಾಗದಲ್ಲಿ ಇಂಜಿನಿಯರಿಂಗ್ ವೈದ್ಯಕೀಯ ಇಂಟಿಗ್ರೇಡ್ ಕೋರ್ಸ್ಗಳು ಹೀಗೆ ವೃತ್ತಿಪರ ಕೋರ್ಸ್ ಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡು ಓದುತ್ತಿದ್ದರೆ ಅಂತವರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಾಖಲೆಗಳು :

ಎಲ್ಐಸಿ ವತಿಯಿಂದ ನೀಡಲಾಗುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ ಜನ್ಮ ದಾಖಲೆ ಬ್ಯಾಂಕ್ ಪಾಸ್ ಬುಕ್ ಜಾತಿ ಪ್ರಮಾಣ ಪತ್ರ 10 ಮತ್ತು 12ನೇ ತರಗತಿಯ ಅಂಕ ಪಟ್ಟಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು.


ಇದನ್ನು ಓದಿ : 3015 ಹುದ್ದೆಗಳಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ : ತಕ್ಷಣ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ :

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು https://www.buddy4study.com/scholarship/lic-golden-jubilee-scholarship ಈ ವೆಬ್ ಸೈಟ್ ಗೆ ಭೇಟಿ ನೀಡಿ 2024 ಜನವರಿ 14ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸರಿಯಾಗಿ ವಿದ್ಯಾರ್ಥಿಗಳಿಗಾಗಿ ಕೆಲವೊಂದು ಕಂಪನಿಗಳು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆದು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಮುಗಿಸಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಕಳುಹಿಸುವುದರ ಮೂಲಕ ಎಲ್ಐಸಿ ಗೋಲ್ಡನ್ ಜುಬ್ಲಿ ಸ್ಕಾಲರ್ಶಿಪ್ ಗಾಗಿ ಅರ್ಜಿ ಸಲ್ಲಿಸಲಾಗಿದೆ ಎಂಬುದರ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...