ನಮಸ್ಕಾರ ಸ್ನೇಹಿತರೆ ಉತ್ತಮ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ನೆರವಾಗುವ ಉದ್ದೇಶದಿಂದ ನೀಡುವ ಶೈಕ್ಷಣಿಕ ಪ್ರೋತ್ಸಾಹ ಧನದ ಮಾಹಿತಿಯ ಬಗ್ಗೆ ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಅದರಂತೆ ಸರ್ಕಾರವು ಗುಣಮಟ್ಟದ ಶೈಕ್ಷಣಿಕ ಜೀವನಕ್ಕಾಗಿ ಪ್ರೋತ್ಸಾಹ ಧನವನ್ನು ನೀಡುತ್ತಿದ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚು ಸಹಕಾರಿಯಾಗುತ್ತಿದೆ.

ಶೈಕ್ಷಣಿಕ ಪ್ರೋತ್ಸಾಹ ಧನ :
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಒಂಟಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಶೈಕ್ಷಣಿಕ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪದವಿಯವರಿಗೆ ಹಾಗೂ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಪಡೆಯಬಹುದಾಗಿದೆ.
ಯಾರಿಲ್ಲ ಅರ್ಜಿ ಸಲ್ಲಿಸಬಹುದು :
ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಲು ಪ್ರೌಢಶಾಲೆ ಪಿಯುಸಿ ಐಟಿಐ ಡಿಪ್ಲೋಮಾ ಸ್ನಾತಕೋತ್ತರ ಪದವಿ ಪದವಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳು ಸಲ್ಲಿಸಬಹುದಾಗಿದೆ. ಕಾರ್ಮಿಕರ ಮಾಸಿಕ ವೇತನವು 35,000 ಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು ಕೇವಲ ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸಹಜನವನ್ನು ನೀಡಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ತಿಳಿಸಿದೆ. ಹಿಂದಿನ ವರ್ಷದಲ್ಲಿ ಶೇಕಡ 50ರಷ್ಟು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಾಗೂ ಶೇಕಡ 45ರಷ್ಟು ಅಂಕಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪಡೆದಿರಬೇಕು.
ವಿದ್ಯಾರ್ಥಿ ವೇತನದ ಮೊತ್ತ :
ಕರ್ನಾಟಕ ಸರ್ಕಾರದ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಸಂಬಂಧಿಸಿದಂತೆ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದ್ದು 6,000ಗಳನ್ನು ಎಂಟರಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ, 8000ಗಳನ್ನು ಐಟಿಐ ಡಿಪ್ಲೋಮೋ ಟಿಸಿಎಚ್ ವಿದ್ಯಾರ್ಥಿಗಳಿಗೆ, 10,000ಗಳನ್ನು ಪದವಿ ವಿದ್ಯಾರ್ಥಿಗಳಿಗೆ, 12000 ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ, ಹಾಗೂ 20,000 ವಿದ್ಯಾರ್ಥಿ ವೇತನವನ್ನು ಇಂಜಿನಿಯರಿಂಗ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
ಇದನ್ನು ಓದಿ : ಹೊಸ ವರ್ಷಕ್ಕೆ ಉದ್ಯೋಗಿಗಳಿಗೆ 7ನೇ ವೇತನ ಆಯೋಗ ಜಾರಿಗೆ ಬರಲಿದೆ ತಿಳಿದುಕೊಳ್ಳಿ
ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ಸರ್ಕಾರದ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು , ದಿನಾಂಕ 31-01-2024 ಒಳಗಾಗಿ ಈ ಪ್ರೋತ್ಸಾಹ ಧನಕ್ಕೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾರ್ಮಿಕ ಮಕ್ಕಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಹೊಸ ಹೊಸ ಯೋಜನೆಗಳ ಪ್ರಯೋಜನವನ್ನು ನೀಡುತ್ತಿದ್ದು ಇದೀಗ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ಸಹ ಜಾರಿಗೆ ತಂದಿದ್ದು ಇದರ ಮೂಲಕ ಸುಮಾರು 20 ಸಾವಿರ ರೂಪಾಯಿಗಳವರೆಗೆ ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ. ಹಾಗಾಗಿ ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಟ್ಯಾಕ್ಟರ್ ಖರೀದಿಸಲು ಶೇಕಡ 50ರಷ್ಟು ಕೇಂದ್ರ ಸರ್ಕಾರದಿಂದ ನೆರವು
- ಡಿ.21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ : ಕಡ್ಡಾಯವಾಗಿ ಈ ದಾಖಲೆ ಬೇಕು