ನಮಸ್ಕಾರ ಸ್ನೇಹಿತರೆ ಸರ್ಕಾರಗಳು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ತ್ಯಜಿಸುವ ನಿಟ್ಟಿನಲ್ಲಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ತರುತ್ತಿದ್ದು ಇದೀಗ ಮಹಿಳೆಯರಿಗಾಗಿಯೇ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯು ಪ್ರೋತ್ಸಾಹಕ ಯೋಜನೆಯಾಗಿದೆ. ಸುಮಾರು 2,50,000ಗಳವರೆಗೆ ಈ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಪಡೆಯಲು ರಾಜ್ಯಾದ್ಯಂತ ಮಹಿಳೆಯರು ಸಿದ್ಧರಾಗಿರುತ್ತಾರೆ.
ಪ್ರೇರಣ ಯೋಜನೆ :
ಪ್ರೇರಣ ಯೋಜನೆಯನ್ನು ಕರ್ನಾಟಕ ಸರ್ಕಾರವು ಇದೀಗ ಮಹಿಳೆಯರಿಗಾಗಿಯೇ ಜಾರಿಗೆ ತಂದಿದ್ದು, ಈ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ವರ್ಗದ ಮಹಿಳೆಯರು ಮಹಿಳಾ ಸ್ವ ಸಹಾಯ ಗುಂಪುಗಳಿಗೆ 2.50 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ನೀಡಲಾಗುತ್ತಿದೆ. ಈ ಯೋಜನೆ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿದ್ದು ಲಿಂಗ ಸಮಾನತೆ ಮತ್ತು ಆರ್ಥಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಒಂದು ಯೋಜನೆ ಮಹತ್ವದ ಹೆಜ್ಜೆಯಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಸರ್ಕಾರದ ಪ್ರೇರಣೆ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :
ಪ್ರೇರಣ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಹೊಂದಿರಬೇಕು ಅವುಗಳೆಂದರೆ ಕರ್ನಾಟಕದ ನಿವಾಸಿಯಾಗಿರಬೇಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುಂಪಿಗೆ ಸೇರಿದವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. 1.5 ಲಕ್ಷ ಕುಟುಂಬದ ವಾರ್ಷಿಕ ಆದಾಯವು ಮೀರಿರಬಾರದು ಅದು ಗ್ರಾಮೀಣ ಪ್ರದೇಶದವರಾಗಿದ್ದ ರೆ. ಹಾಗೂ ಪಟ್ಟಣ ಪ್ರದೇಶದಲ್ಲಿ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು. 21 ರಿಂದ 60 ವರ್ಷ ವಯಸ್ಸನ್ನು ಅರ್ಜಿದಾರರು ಹೊಂದಿರಬೇಕು.
ಇದನ್ನು ಓದಿ :ಗ್ಯಾಸ್ ಸಿಲಿಂಡರ್ ಸಬ್ಸಿಡಿ 300 : ಪ್ರತಿ ಭಾರಿ ಪಡೆದುಕೊಳ್ಳಿ ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರದ ಪ್ರೇರಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ https://adcl.karnataka.gov.in ಹಾಗೂ https://sevasindhuservices.karnataka.gov.in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಡಿಸೆಂಬರ್ 15ನೇ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹಾಗೂ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ನಿಗಮದ ಜಿಲ್ಲಾ ಕಚೇರಿಗೆ ಒಂದು ಪ್ರತಿಯನ್ನು ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಹಿಳೆಯರಿಗೆ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಕರ್ನಾಟಕ ಸರ್ಕಾರವು ಮಹಿಳೆಯರಿಗಾಗಿಯೇ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಪ್ರೇರಣಾ ಯೋಜನೆಯ ಮೂಲಕ ಸುಮಾರು ಎರಡುವರೆ ಲಕ್ಷದವರೆಗೆ ಸಹಾಯಧನವನ್ನು ಪಡೆಯಬಹುದಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಮಹಿಳೆಯರಿಗೆ ಇರುವಂತಹ ಯೋಜನೆಯ ಬಗ್ಗೆ ನಿಮಗೆ ತಿಳಿದಿರುವ ಸ್ವಸಹಾಯ ಗುಂಪುಗಳಿಗೆ ಹಾಗೂ ಮಹಿಳೆಯರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರಿಗೆ ಬೆಂಬಲ ಬೆಲೆ ಘೋಷಣೆ : ಹತ್ತಿ ಭತ್ತ ರಾಗಿ ಜೋಳಗಳಿಗೆ ಸಿಗುತ್ತೆ ನೋಡಿ
- ರಾಜ್ಯದಲ್ಲಿ ಡಿಸೆಂಬರ್ 17ರಿಂದ ಭಾರಿ ಮಳೆ ಆಗುವ ಸಾಧ್ಯತೆ : ನಿಮ್ಮ ಜಿಲ್ಲೆ ಹೆಸರು ಇದ್ದೀಯ ನೋಡಿ