ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡುತ್ತಿದ್ದು ಈ ಸಿಹಿ ಸುದ್ದಿಯ ಮೂಲಕ ಉದ್ಯೋಗವನ್ನು ಹುಡುಕುತ್ತಿರುವ ಯುವಕ ಯುವತಿಯರು ಉದ್ಯೋಗವನ್ನು ಪಡೆದುಕೊಳ್ಳಲು ಅವಕಾಶ ಬಂದೊದಗಿದೆ.ಈ ಉದ್ಯೋಗವಕಾಶವು ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನೋಡಬಹುದಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಹಾಗಾದರೆ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗವಕಾಶ :
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಲ್ಪಿಸಿದೆ. ಉದ್ಯೋಗ ಅಧಿಸೂಚನೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ್ದು, ವಿದ್ಯಾರ್ಹತೆ ,ಕೆ ಎಸ್ ಆರ್ ಟಿ ಸಿ ಹುದ್ದೆಗಳ ವಿವರ ಹಾಗೂ ವಯಸ್ಸಿನ ಮಿತಿಯನ್ನು ಸೇರಿದಂತೆ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಬಹುದಾಗಿದೆ. https://ksrtc.in ಈ ವೆಬ್ಸೈಟ್ ಗೆ ಭೇಟಿ ನೀಡಿ ಉದ್ಯೋಗದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಹುದ್ದೆಯ ವಿವರಗಳು :
- ಚಾಲಕ ಮತ್ತು ಕಂಡಕ್ಟರ್ ಹುದ್ದೆಗಳು- 4000
- ಡ್ರೈವಿಂಗ್ ಸ್ಟಾಫ್ -1619 ಹುದ್ದೆಗಳು
- ಬಿಎಂಟಿಸಿ ಕಂಡಕ್ಟರ್- 2500 ಹುದ್ದೆಗಳು
- ತಾಂತ್ರಿಕ ಸಿಬ್ಬಂದಿ- 600 ಹುದ್ದೆಗಳು
ಹೀಗೆ ರಾಜ್ಯ ಸರ್ಕಾರವು ಶಕ್ತಿ ಯೋಜನೆಗೆ ಜಾರಿಗೆ ತಂದಂತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿರೀಕ್ಷೆಗೆ ಮೀರಿ ಸ್ಪಂದನೆ ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೆಎಸ್ಆರ್ಟಿಸಿ ವಿಭಾಗದಲ್ಲಿ ಒಟ್ಟಾರೆ 8719 ಹುದ್ದೆಗಳಿಗೆ ಚಾಲನ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದಿ ಸೂಚನೆ ಹೊರಡಿಸಿದೆ ಎಂದು ಹೇಳಬಹುದಾಗಿದೆ.
ಹುದ್ದೆಗಳಿಗೆ ಇರಬೇಕಾದ ವಿದ್ಯಾರ್ಹತೆ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹುದ್ದೆಗಳಿಗೆ ಅರ್ಜಿಯನ್ನು ಹವಾನಿಸಿದ್ದು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಹತ್ತನೇ ತರಗತಿ ಅಥವಾ ಐಟಿಐ ಅನ್ನು ಪೂರ್ಣಗೊಳಿಸಬೇಕು ಎಂದು ಕೆಎಸ್ಆರ್ಟಿಸಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ಇದನ್ನು ಓದಿ : ಕೇಂದ್ರ ಸರ್ಕಾರದಿಂದ ಕ್ಯಾಶ್ ಬ್ಯಾಕ್ ಯೋಜನೆ : ಹೆಚ್ಚಿನ ಮಾಹಿತಿಗಾಗಿ ಓದಿ
ಕೆಎಸ್ಆರ್ಟಿಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಕೆ ಎಸ್ ಆರ್ ಟಿ ಸಿ ಅಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಕೆಲವೊಂದು ಅರ್ಹತಾ ಮಾನ್ಯ ದಂಡಗಳನ್ನು ಪೂರೈಸುವುದರ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ. ಅಂದರೆ ಕೆಎಸ್ಆರ್ಟಿಸಿ ಹುದ್ದೆಗಳಿಗೆ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ.
ಹುದ್ದೆಗಳಿಗೆ ಅಗತ್ಯವಿರುವ ದಾಖಲೆಗಳು :
ಕೆಎಸ್ಆರ್ಟಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಇರಬೇಕು ಅವುಗಳೆಂದರೆ, ಪಾಸ್ಪೋರ್ಟ್ ಸೈಜ್ ಫೋಟೋ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು. 2023 ನವೆಂಬರ್ 30 ಕೊನೆಯ ದಿನಾಂಕ ಆಗಿದೆ.
ಒಟ್ಟಾರೆಯಾಗಿ ರಾಜ್ಯ ಸರಕಾರವು ನಿರುದ್ಯೋಗ ಯುವಕ ಯುವತಿಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗವಕಾಶ ಸೃಷ್ಟಿಸಿದ್ದು ಆಸಕ್ತ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಿಮ್ಮ ಗೆಳೆಯರು ಹಾಗೂ ಸಂಬಂಧಿಕರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ರೈತರಿಗೆ ಗುಡ್ ನ್ಯೂಸ್ : ಈ ಹೊಸ ಯೋಜನೆಯಲ್ಲಿ ರೈತರಿಗೆ ಹಣ ಸಿಗುತ್ತದೆ
ಟ್ರೂ ಕಾಲರ್ ಬಳಸುವವರು ತಪ್ಪದೆ ನೋಡಿ : ಕಾದಿದೆ ಶಾಕ್ ನಿಮ್ಮಗಾಗಿ