ನಮಸ್ಕಾರ ಸ್ನೇಹಿತರೇ ಈಗಾಗಲೇ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳು ಪ್ರಣಾಳಿಕೆಯಂತೆ ಬಿಡುಗಡೆಯಾಗಿದೆ. ಯಶಸ್ವಿಯಾಗಿ ನಾಲ್ಕು ಗ್ಯಾರಂಟಿ ಯೋಜನೆಗಳು ಚಾಲ್ತಿಯಲ್ಲಿದ್ದು ಇದೀಗ ಆರಂಭವಾಗ ಬೇಕಾದ ಯೋಜನೆ ಒಂದು ಎಂದರೆ ಅದು ಯುವನಿಧಿ ಯೋಜನೆಯಾಗಿದೆ. ಈ ಯೋಜನೆಯನ್ನು ಈಗಾಗಲೇ ರಾಜ್ಯ ಸರ್ಕಾರವು ನಿರುದ್ಯೋಗ ಯುವಕ ಯುವತಿಯರಿಗೆ ಜಾರಿಗೆ ತಂದಿದ್ದು ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳು ಬೇಕು ಎಂಬುದನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಯುವನಿಧಿ ಯೋಜನೆಯ ಮೊತ್ತ :
ಪ್ರತಿ ತಿಂಗಳು 3000ಗಳನ್ನು ಪದವಿ ಹೊಂದಿರುವ ನಿರುದ್ಯೋಗ ಯುವಕ ಯುವತಿಯರಿಗೆ ಹಾಗೂ ಪ್ರತಿ ತಿಂಗಳು 1500 ರೂಪಾಯಿಗಳನ್ನು ಡಿಪ್ಲೋಮೋ ಹೊಂದಿರುವ ನಿರುದ್ಯೋಗ ಯುವಕ ಯುವತಿಯರಿಗೆ ನಿರುದ್ಯೋಗ ಬಚ್ಚೆಯಾಗಿ ರಾಜ್ಯ ಸರ್ಕಾರವು ನೀಡಲು ನಿರ್ಧರಿಸಿದೆ. ಆದರೆ 2022 – 23ನೇ ಸಾಲಿನ ಪದವಿ ಅಥವಾ ಡಿಪ್ಲೋಮೋದಲ್ಲಿ ಉತ್ತೀರ್ಣ ರಾದ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಜನವರಿಯಲ್ಲಿ ಯೋಜನೆ ಜಾರಿಯಾಗಲಿದೆ :
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇವನಿಗೆ ಯೋಜನೆ ಜನವರಿಯಲ್ಲಿ ಜಾರಿಯಾಗಲಿದೆ ಎಂದು ಹೇಳಿದ್ದು ಡಿಸೆಂಬರ್ ತಿಂಗಳಿನಲ್ಲಿಯೇ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇರಬಹುದು ಹಾಗೂ ಸೇವಾ ಸಿಂಧು ಪೋರ್ಟಲ್ನ ಮೂಲಕ ನಿರುದ್ಯೋಗದ ಯುವಕ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು ಎಂದು ಹೇಳಲಾಗಿದೆ.
ಇದನ್ನು ಓದಿ : ಮತ್ತೊಂದು ಭರ್ಜರಿ ಯೋಜನೆ : ಈ ಕೂಡಲೇ ಹೆಸರನ್ನು ನೋಂದಾಯಿಸಿಕೊಳ್ಳಬೇಕು
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಮತದಾರರ ಗುರುತಿನ ಚೀಟಿ ಆಧಾರ್ ಕಾರ್ಡ್ ಹತ್ತನೇ ತರಗತಿಯ ಅಂಕಪಟ್ಟಿ ಪದವಿ ಅಭ್ಯರ್ಥಿಗಳಾದರೆ ಪದವಿ ಅಂಕಪಟ್ಟಿ ಡಿಪ್ಲೋಮಾ ಆಗಿದ್ದರೆ ಡಿಪ್ಲೋಮಾ ಅಂಕಪಟ್ಟಿ ಬ್ಯಾಂಕ್ ಪಾಸ್ ಬುಕ್ ಪಾಸ್ಪೋರ್ಟ್ ಸೈಜ್ ಫೋಟೋ ಮೊಬೈಲ್ ನಂಬರ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಯುವ ನಿಧಿ ಯೋಜನೆಯನ್ನು ಜಾರಿಗೆ ತರಲು ದಿನಾಂಕವನ್ನು ಫಿಕ್ಸ್ ಮಾಡಿದ್ದು ಜನವರಿಯಲ್ಲಿ ಯುವನಿಧಿ ಯೋಜನೆಯ ಪ್ರಯೋಜನವನ್ನು ನಿರುದ್ಯೋಗ ಯುವಕ ಯುವತಿಯರು ಪಡೆದುಕೊಳ್ಳಬಹುದಾಗಿದೆ ಎಂದು ಹೇಳಬಹುದು. ಹಾಗಾಗಿ ಮಾಹಿತಿಯನ್ನು ನಿರುದ್ಯೋಗ ಯುವಕ ಯುವತಿಯರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಚಿನ್ನ ಬೆಲೆಯಲ್ಲಿ ಇಳಿಕೆ : ರಾಜ್ಯದಲ್ಲಿ ಚಿನ್ನದ ಬೆಲೆ ಎಷ್ಟಿದೆ ನೋಡಿ ಎಲ್ಲರಿಗೂ ಸಂತೋಷ
- ಎಷ್ಟು ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿವೇ ಕೂಡಲೇ ಚೆಕ್ ಮಾಡಿಕೊಳ್ಳಿ : ಇಲ್ಲದಿದ್ದರೆ ಸಮಸ್ಯೆ ತಪ್ಪಿದ್ದಲ್ಲ