ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ವಿದ್ಯಾಸಿರಿ ವಿದ್ಯಾರ್ಥಿ ವೇತನ ನೀಡುತ್ತಿರುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡಬಹುದಾಗಿದೆ. ವಿದ್ಯಾರ್ಥಿ ವೇತನ ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಂತೆ ವಿದ್ಯಾರ್ಥಿಗಳು ಇಲಾಖೆಯು ನಿಗದಿಪಡಿಸಿರುವ ದಿನಾಂಕದೊಳಗೆ ಆನ್ಲೈನ್ ಮೂಲಕ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಆ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನ :
ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡಲು ಅರ್ಜಿ ಕರೆಯಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಸರ್ಕಾರದ ಪ್ರಯೋಜನವನ್ನು ಪಡೆಯಬಹುದಾಗಿದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನದ ಪ್ರಯೋಜನಗಳು :
ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನ ದ ಪ್ರಯೋಜನಗಳೆಂದರೆ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಹೀಗೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :
ಅರ್ಹ ವಿದ್ಯಾರ್ಥಿಗಳು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರುವುದು ಮುಖ್ಯವಾಗುತ್ತದೆ ಅವುಗಳೆಂದರೆ ಆಧಾರ ಸಂಖ್ಯೆ ಹಾಗೂ ಆಧಾರ್ ನಲ್ಲಿರುವ ಹಾಗೆ ಹೆಸರು ಮೊಬೈಲ್ ನಂಬರ್ ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಯುಡಿಐಡಿ ಗುರುತಿನ ಸಂಖ್ಯೆ ಇಮೇಲ್ ಐಡಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ.
ಇದನ್ನು ಓದಿ ; ಗೃಹಲಕ್ಷ್ಮಿ ಯೋಜನೆ ರದ್ದು: ಸರ್ಕಾರದಿಂದ ಮಹತ್ವದ ನಿರ್ಧಾರ, ಕಾರಣ ಏನು?
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿಗಳು SSP ಸ್ಕಾಲರ್ಶಿಪ್ ಪೋರ್ಟಲ್ ಗೆ ಭೇಟಿ ನೀಡಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. https://ssp.postmatric.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ ಈ ವಿದ್ಯಾರ್ಥಿ ವೇತನಕ್ಕೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಇಲಾಖೆ ಸಹಾಯವಾಣಿ ಸಂಖ್ಯೆ 8050770005 ಕರೆ ಮಾಡಬಹುದಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ಮೆಟ್ರಿಕ್ ಅಂತರದ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆಯುವುದರ ಮೂಲಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ ಒಂದು ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಸಹಾಯಧನವನ್ನು ಸರ್ಕಾರದಿಂದ ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಾಗಿದ್ದಾರೆ ಅವರು ಕೂಡ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆಯಲಿ ಧನ್ಯವಾದಗಳು.
ಇತರೆ ವಿಷಯಗಳು ;
- ಮೋದಿ ಉಚಿತ ಲ್ಯಾಪ್ಟಾಪ್ ಯೋಜನೆ : ಮೊದಲು ಅರ್ಜಿ ಸಲ್ಲಿಸಿದವರಿಗೆ ಸಿಗುತ್ತೆ
- ಈ 4 ರಾಶಿಯವರಿಗೆ ವೃತ್ತಿ ವ್ಯವಹಾರದಲ್ಲಿ ಈ ವಾರ ತುಂಬ ಲಾಭ ಇದೆ , ಹೆಚ್ಚು ಈ ಕೆಲಸ ಮಾಡಿ