ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ವಿಚಾರದಲ್ಲಿ ಬದಲಾವಣೆ ಮಾಡಿರುವುದರ ಬಗ್ಗೆ. ಅದರಂತೆ ಯಾವ ರೀತಿಯ ಬದಲಾವಣೆಯನ್ನು ರಾಜ್ಯ ಸರ್ಕಾರವು ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ಮಾಡಲಾಗಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ರಾಜ್ಯ ಸರ್ಕಾರದಿಂದ ಬದಲಾವಣೆ :
ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ವಿಚಾರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಜ್ಯ ಸರ್ಕಾರವು ಇದರ ಬಗ್ಗೆ ಕಳೆದ ವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಿ 750 ಹುದ್ದೆಗಳನ್ನು ಮೊದಲ ಹಂತದಲ್ಲಿ ಭರ್ತಿ ಮಾಡಲು ಆದಷ್ಟು ಬೇಗ ಕಾರ್ಯಗಳನ್ನು ಆರಂಭಿಸಲಾಗುತ್ತದೆ ಎಂದು ಕಂದಾಯ ಇಲಾಖೆಯು ಮಾಹಿತಿ ನೀಡಿದೆ.
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ :
ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಈ ಹಿಂದೆ ಗ್ರಾಮದ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನೇಮಕ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ಮಾಡಲಾಗುತ್ತಿತ್ತು ಆದರೆ ಇನ್ನು ಮುಂದೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರವು ತೀರ್ಮಾನ ತೆಗೆದುಕೊಂಡಿದೆ.
ಇದನ್ನು ಓದಿ : ಈ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಉಚಿತ 5 ಲಕ್ಷ ಸೌಲಭ್ಯ ಪಡೆದುಕೊಳ್ಳಬಹುದು
750 ಹುದ್ದೆಗಳಿಗೆ ನೇಮಕಾತಿ :
9000 ಗ್ರಾಮ ಆಡಳಿತ ಅಧಿಕಾರಿಗಳು ಕರ್ನಾಟಕ ರಾಜ್ಯದಲ್ಲಿ ಇದ್ದು ಅದನ್ನು ಹೊರತುಪಡಿಸಿ ಇನ್ನೂ 1500 ಹುದ್ದೆಗಳು ಹಾಗೆಯೇ ಭರ್ತಿಯಾಗದೆ ಉಳಿದಿವೆ. ಹಾಗಾಗಿ 750 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಮೊದಲ ಹಂತದಲ್ಲಿ ಭರ್ತಿ ಮಾಡಲು ಕಂದಾಯ ಇಲಾಖೆಯು ನಿರ್ಧಾರವನ್ನು ಕೈಗೊಂಡಿದ್ದು ಆರ್ಥಿಕ ಇಲಾಖೆಗೆ ಈಗಾಗಲೇ ಸರ್ಕಾರವು ಪ್ರಸ್ತಾವನೆ ಸಲ್ಲಿಕೆ ಮಾಡಿದೆ.
ರಾಜ್ಯದ ಅಧಿಕೃತ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಾಧಿಕಾರಗಳಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವುದರ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅದಷ್ಟೇ ಅಲ್ಲದೆ ಮೆರಿಟ್ ಪಟ್ಟಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ನಂತರ ಜಿಲ್ಲಾವಾರು ಆಯ್ಕೆ ಪ್ರಾಧಿಕಾರ ಬಿಡುಗಡೆ ಮಾಡುತ್ತದೆ ಈ ಪಟ್ಟಿಯಲ್ಲಿ ಗರಿಷ್ಠ ಅಂಕಗಳ ಆಧಾರದ ಮೂಲಕ ಮಾಡುವುದರಿಂದ ಸ್ಥಳಗಳನ್ನು ತಿಳಿಸಿ ಭರ್ತಿಯನ್ನು ಮಾಡಲಾಗುತ್ತದೆ.
ಹೀಗೆ ಕರ್ನಾಟಕ ಸರ್ಕಾರವು ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆಯನ್ನು ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಇದರಿಂದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಸಂಬಂಧಿಸಿದಂತೆ ಈ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಕೇಂದ್ರ ಸರ್ಕಾರದಿಂದ ನೀವು 5 ಲಕ್ಷ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ
- ಇಂಟಲಿಜೆನ್ಸ್ ಬ್ಯುರೋದಲ್ಲಿ 226 ಹುದ್ದೆಗಳ ನೇಮಕ : ಬೇಗ ಅರ್ಜಿ ಸಲ್ಲಿಸಿ