ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳೆರಡು ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಬಿಡುಗಡೆ ಮಾಡಿದೆ ಅದರಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಜೀವನ ನಡೆಸಲು ಅನುಕೂಲವಾಗುವಂತಹ ಕೆಲವು ಪ್ರಮುಖ ಸಾಲ ಸೌಲಭ್ಯದ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ.
ಮಹಿಳೆಯರು ತಮ್ಮ ಮಕ್ಕಳಿಗೂ ಕೂಡ ಇದೀಗ ಪೌಷ್ಟಿಕ ಆಹಾರ ನೀಡಬೇಕೆ ಎನ್ನುವ ಉದ್ದೇಶದಿಂದ ಹಾಗೂ ಸ್ತ್ರೀಯರು ಗರ್ಭಿಣಿ ಸಂದರ್ಭದಲ್ಲಿ ಆರೋಗ್ಯಕರವಾಗಿ ಮಗುವನ್ನು ಇರಬೇಕು ಎನ್ನುವ ವಿಚಾರವನ್ನು ಕೇಂದ್ರ ಸರ್ಕಾರ ಗಮನದಲ್ಲಿಟ್ಟುಕೊಂಡು ಮಹಿಳೆಯರಿಗೆ ಉಚಿತವಾಗಿ 6,000ಗಳ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಿದೆ.
ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ :
ಮಹಿಳೆಯರು ಉಚಿತವಾಗಿ 6 ಸಾವಿರ ರೂಪಾಯಿಗಳನ್ನು ಈ ಯೋಜನೆಯ ಅಡಿಯಲ್ಲಿ ಪಡೆಯಬಹುದಾಗಿದ್ದು ಈ ಯೋಜನೆಯ ಪ್ರಯೋಜನ ಯಾರಿಗೆಲ್ಲ ಸಿಗಲಿದೆ ಎಂದು ನೋಡುವುದಾದರೆ ಗರ್ಭಿಣಿ ಸ್ತ್ರೀಯರಿಗಾಗಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಆರಂಭಿಸಿದೆ. ಅಪೌಷ್ಟಿಕತೆಯಿಂದ ಹುಟ್ಟುವ ಮಕ್ಕಳು ಮುಂದೆಯೂ ಕೂಡ ಯಾವುದೇ ಸಮಸ್ಯೆಯನ್ನು ಅನುಭವಿಸುತ್ತಿರುತ್ತಾರೆ.
ಇದನ್ನು ಹೋಗಲಾಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಗರ್ಭಿಣಿ ಸ್ತ್ರೀ ಮಗು ಹೊಟ್ಟೆಯಲ್ಲಿಯೇ ಇರುವಾಗಲೇ ಸರಿಯಾದ ಹಾಗೂ ಉತ್ತಮವಾದ ಪೌಷ್ಟಿಕ ಆಹಾರ ಸೇವನೆ ಮಾಡಿ ಆರೋಗ್ಯವಂತ ಮಗುವಿಗೆ ಜನನ ನೀಡಬೇಕು ಎಂದು ಗರ್ಭಿಣಿ ಸ್ತ್ರೀಯರಿಗೆ 6,000ಗಳ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಿದೆ.
ಇದನ್ನು ಓದಿ : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ : ತಿಂಗಳಿಗೆ 15,000 ಹಣ ಪಡೆಯಿರಿ
ಯಾರೆಲ್ಲ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು :
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು 19 ವರ್ಷಕ್ಕಿಂತ ಮೇಲಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಯ ಪ್ರಯೋಜನವೂ ಮೊದಲ ಹಾಗೂ ಎರಡನೇ ಹೆರಿಗೆ ಮಾಡಿಕೊಳ್ಳುವ ಮಹಿಳೆಯರಿಗೆ ಸಿಗುತ್ತದೆ. ಗರ್ಭಿಣಿ ಸ್ತ್ರೀ ಹೆಸರು ನೊಂದಾಯಿಸಿಕೊಂಡ ನಂತರ ಹಾಗೂ ಗರ್ಭಿಣಿ ಸ್ತ್ರೀ ಹೆಸರು ನೊಂದಾಯಿಸಿಕೊಂಡ ನಂತರ ಹಾಗೂ ಮಗುವಿಗೆ ಜನ್ಮ ನೀಡಿದ ನಂತರ ಕಂತುಗಳ ರೂಪದಲ್ಲಿ 6000ಗಳನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಗರ್ಭಿಣಿ ಸ್ತ್ರೀಯರು ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. https://wcd.nic.in/schemes/pradhan-mantri-matru-vandana-yojana ಹೀಗೆ ಸರಿಯಾದ ದಾಖಲೆಗಳನ್ನು ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಒಂದು ವೇಳೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗದೆ ಹೋದರೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಮಹಿಳೆಯರಿಗಾಗಿಯೇ ಜಾರಿಗೆ ತರುತ್ತಿದ್ದು ಈ ಯೋಜನೆಗಳ ಸಂಪೂರ್ಣ ಪ್ರಯೋಜನವನ್ನು ಮಹಿಳೆಯರು ಪಡೆಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಕೇಂದ್ರ ಸರ್ಕಾರದ ಸಹಾಯಧನವನ್ನು ಪಡೆಯಲಿ ಧನ್ಯವಾದಗಳು.
ಇತರೆ ವಿಷಯಗಳು :
- ಒಂದು ಲಕ್ಷ ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡಿದರೆ ಎಷ್ಟು ಲಾಭ ಸಿಗುತ್ತದೆ ತಿಳಿದಿದೆಯಾ ?
- ನೀರನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ಕುಡಿಯುವವರಿಗೆ ಎಚ್ಚರಿಕೆ!!! ನಿಮಗೆ ಏನೆಲ್ಲಾ ಸಮಸ್ಯೆ ಬರುತ್ತೆ ನೋಡಿ